ಯಲ್ಲಾಪುರದ ತಾಲೂಕಿನ ಇಡಗುಂದಿಯಲ್ಲಿ ಮಾನ್ಯ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಇಂದು ತಾಲೂಕಿನ ಇಡಗುಂದಿ ಗ್ರಾಮದಲ್ಲಿ ನೂತನ ಪಶು ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸುವುದರ ಮೂಲಕವಾಗಿ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಶ್ರೀಕಾಂತ ಶೆಟ್ಟಿ, ವಿಕಾಸ ಅರ್ಬನ್ ಬ್ಯಾಂಕ್ ಅಧ್ಯಕ್ಷರಾದ ಮುರಳಿ ಹೆಗಡೆ ಸೇರಿದಂತೆ ಇಡಗುಂದಿ ಗ್ರಾಮ ಪಂಚಾಯತ ಉಪಾಧ್ಯಕ್ಷರು, ಸದಸ್ಯರು ಪಕ್ಷದ ವಿವಿಧಸ್ಥರದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ:ಶ್ರೀಪಾದ್ ಎಸ್ ಏಚ್