Latest

ರೈಲ್ವೆ ಟ್ರ್ಯಾಕ್​ ಮೇಲೆ ರೀಲ್ಸ್​ ಮಾಡಿದ ತಾಯಿ – ಮಗಳು; ವಿಡಿಯೋ ವೈರಲ್ ಆದ ಬೆನ್ನಲ್ಲೇ ಪ್ರಕರಣ ದಾಖಲು!

ಅಬ್​ ತೇರೆ ಬಿನ್​ ಹಮ್​ ಝೀ ಲೇಂಗೆ ಎಂಬ ಹಾಡಿಗೆ ರೈಲ್ವೆ ಟ್ರ್ಯಾಕ್​​ನಲ್ಲಿ ತಾಯಿ ಹೆಜ್ಜೆ ಹಾಕಿದರೆ ಮಗಳು ಅದನ್ನು ರೆಕಾರ್ಡ್ ಮಾಡಿದ್ದಾಳೆ. ರೈಲು ಹಳಿಗಳ ಮೇಲೆ ತಾಯಿ ತನ್ನ ನೃತ್ಯ ಕೌಶಲ್ಯವನ್ನು ಪ್ರದರ್ಶಿಸುತ್ತಿದ್ದರೆ ಮಗಳು ಇದನ್ನು ಮೊಬೈಲ್​ ಕ್ಯಾಮರಾದಲ್ಲಿ ಶೂಟ್​ ಮಾಡುತ್ತಿದ್ದಳು ಎನ್ನಲಾಗಿದೆ.
ವೈರಲ್​ ಆಗಿರುವ ಈ ವಿಡಿಯೋದಲ್ಲಿ, ತಾಯಿ ರೈಲು ಹಳಿಗಳ ಮೇಲೆ ನಡೆದುಕೊಂಡು ಹೋಗುತ್ತಿರೋದನ್ನು ಕಾಣಬಹುದಾಗಿದೆ. ಬಳಿಕ ರೈಲು ಹಳಿಗಳ ತಾಯಿ ನೃತ್ಯ ಪ್ರದರ್ಶಿಸಿದ್ದಾರೆ. ಆಗ್ರಾದ ಫೋರ್ಟ್​ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ರೈಲು ಹಳಿಗಳ ಮೇಲೆ ನೃತ್ಯ ಮಾಡಿದ ಮಹಿಳೆಯನ್ನು ಮೀನಾ ಸಿಂಗ್​ ಎಂದು ಗುರುತಿಸಲಾಗಿದೆ. ಮೀನಾ ಸಿಂಗ್​ ಸ್ವಂತ ಯುಟ್ಯೂಬ್​ ಚಾನೆಲ್​ ಹೊಂದಿದ್ದು ಇದರಲ್ಲಿ 47 ಸಾವಿರಕ್ಕೂ ಅಧಿಕ ಸಬ್​ಸ್ಕ್ರೈಬರ್​ ಹೊಂದಿದ್ದಾಳೆ. ಈಕೆಯ ಯುಟ್ಯೂಬ್​ ಚಾನೆಲ್​ನಲ್ಲಿ ರೈಲ್ವೆ ಹಳಿಗಳ ಮೇಲೆ ಮಾಡಿದ ಇನ್ನೂ ಅನೇಕ ವಿಡಿಯೋಗಳನ್ನು ಕಾಣಬಹುದಾಗಿದೆ. ರೈಲ್ವೆ ಹಳಿಗಳ ಮೇಲೆ ಈ ಮಹಿಳೆ ಭೋಜ್​ಪುರಿ ಹಾಡಿಗೆ ಕುಣಿದಿದ್ದು ಆ ಸಂದರ್ಭದಲ್ಲಿ ರೈಲು ಹಳಿಗಳ ಮೇಲೆ ಬಂದಿದೆ. ರೈಲು ಬಂದರೂ ಕ್ಯಾರೆ ಎನ್ನದೇ ಮೀನಾ ಸಿಂಗ್​ ತನ್ನ ಪಾಡಿಗೆ ತಾನು ರೀಲ್ಸ್​ ಮಾಡೋದ್ರಲ್ಲಿ ಬ್ಯುಸಿ ಆಗಿದ್ದರು.
ಮೀನಾ ಸಿಂಗ್​ರ ಈ ವೈರಲ್​ ವಿಡಿಯೋ ಎಲ್ಲೆಡೆ ಸಾಕಷ್ಟು ವಿರೋಧಕ್ಕೆ ಕಾರಣವಾಗುತ್ತಿದ್ದಂತೆಯೇ ಈಕೆಯ ವಿರುದ್ಧ ರೈಲ್ವೆ ಕಾಯ್ದೆ 145 ಹಾಗೂ 147 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತಾಯಿ ಹಾಗೂ ಮಹಿಳೆ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಇನ್ಮೇಲೆ ಈ ರೀತಿಯ ಕೃತ್ಯ ಎಸಗುವುದಿಲ್ಲ ಎಂದು ತಾಯಿ ಮಗಳು ತಪ್ಪೊಪ್ಪಿಗೆ ನೀಡಿದ ಬಳಿಕ ಇಬ್ಬರಿಗೂ ಜಾಮೀನು ನೀಡಲಾಗಿದೆ.

kiran

Recent Posts

ಬೈಕ್ ಟಿಪ್ಪರ್ ನಡುವೆ ಡಿಕ್ಕಿ ಬೈಕ್ ಸವಾರ ಸಾವು

ನಂಜನಗೂಡು: ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸಮೀಪ…

1 month ago

ಅಪರಿಚಿತ ಕಾರು ಡಿಕ್ಕಿ; ಐವರಿಗೆ ಗಂಭೀರ ಗಾಯ, ಓರ್ವ ಮಹಿಳೆ ಸ್ಥಳದಲ್ಲೇ ಸಾವು.

ನಂಜನಗೂಡು: ಅಪರಿಚಿತ ಕಾರು ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ…

1 month ago

ರಸ್ತೆ ಅಪಘಾತ; ಗೊಲಗೇರಿ ಗ್ರಾಮದ ಯುವಕ ಸಾವು.

ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಯಿಂದ ಗೊಲಗೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆ ಅಪಘಾತದಲ್ಲಿ ಗೊಲಗೇರಿ ಗ್ರಾಮದ ಯುವಕ…

1 month ago

ಕುಡಿಯುವ ನೀರಿನ ಬಿಲ್ ಪಾವತಿ ಮಾಡಬೇಡಿ -ಮಾಜಿ ಶಾಸಕ ಹರ್ಷವರ್ಧನ್

ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್‌ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ…

1 month ago

ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಭಟ್ಕಳ ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಅವರು 50,000 ಲಂಚ ಸ್ವೀಕರಿಸುತ್ತಿದ್ದ ವೇಳೆ…

1 month ago

ಮಟ-ಮಟ ಮಧ್ಯಾಹ್ನ‌ ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿ ‌

ಗೌರಿಬಿದನೂರು ನಗರದ ವಿನಾಯಕ ನಗರದ ವಾಸಿ ಪದ್ಮ ಜೈನ್ (59) ಎಂಬುವವರ 50 ಗ್ರಾಂ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ…

1 month ago