ಚುನಾವಣಾ ಆಯೋಗದ ಅನುಮತಿ ಪಡೆಯದೆ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಮಾಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗ ಖಡಕ್ ಎಚ್ಚರಿಕೆ ನೀಡಿದೆ. ಈ ಸಂಬಂಧ ರಾಜ್ಯ ಚುನಾವಣಾದಿಕಾರಿ ಮನೋಜ್ಕುಮಾರ್ ಮೀನಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರಿಗೆ ಪತ್ರ ಬರೆದಿದ್ದು, ಒಂದು ವೇಳೆ ಚುನಾವಣಾ ಆಯೋಗದ ಅನುಮತಿ ಪಡೆಯದೆ ವರ್ಗಾವಣೆಗೊಳಿಸಿದರೆ ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಮಾಡುವಾಗ ಮುಖ್ಯ ಚುನಾವಣಾಕಾರಿಯವರ ಸಹಮತಿ ಪಡೆಯಬೇಕೆಂದು ನಿರ್ದೇಶನ ನೀಡಿದ್ದರೂ ಇತ್ತೀಚೆಗೆ ಸರ್ಕಾರ ಈ ಬಗ್ಗೆ ಗಮನ ಹರಿಸಿಲ್ಲ ಎಂದು ಮನೋಜ್ಕುಮಾರ್ ಮೀನಾ ಹೇಳಿದ್ದಾರೆ.