ಮುಂಡಗೋಡ : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಇಂದು ಪಟ್ಟಣ ಟೌನ್ ಹಾಲ್ ನಲ್ಲಿ ಪಟ್ಟಣದ ಕೊಳಗೇರಿ ನಿವಾಸಿಗಳಿಗೆ ” ಅಧಿಕೃತ ಹಕ್ಕು ಪತ್ರ ವಿತರಣಾ ” ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿದರು.
30 ವರ್ಷಗಳ ನಂತರ ಮೊಟ್ಟಮೊದಲ ಬಾರಿಗೆ ಪಟ್ಟಣದ ಗಾಂಧಿ ನಗರ, ಕಂಬಾರಗಟ್ಟಿ, ಲಮಾಣಿ ತಾಂಡ, ಅಂಬೇಡ್ಕರ್ ಬಡಾವಣೆ 250 ಜನ ಅರ್ಹ ಫಲಾನುಭವಿಗಳಿಗೆ ಸಚಿವರು ಅಧಿಕೃತ ಹಕ್ಕು ಪತ್ರವನ್ನು ವಿತರಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಇನ್ನುಳಿದ ಹಲವಾರು ಜನರಿಗೆ ಎರಡು ತಿಂಗಳಲ್ಲಿ ಹಕ್ಕು ಪತ್ರ ವಿತರಿಸಲಾಗುವುದು ಎಂದು ಹೇಳಿದ ಅವರು ಇಂತಹ ಕೆಲಸ ಮಾಡಲು ಅವಕಾಶ ಸಿಕ್ಕಿರುವುದು ನನ್ನ ಪುಣ್ಯ ಎಂದು ಹೇಳಿದರು.ಇಷ್ಟು ದಿನಗಳ ಕಾಲ ಮನೆಗಳನ್ನು ಮಾತ್ರ ನೀಡುತ್ತಿದ್ದೆವು ಇಂದು ನಿಮಗೆ ಹಕ್ಕು ಪತ್ರಗಳನ್ನು ನೀಡುತ್ತಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ನಾಗಭೂಷಣ ಹಾವಣಗಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ರವಿಗೌಡ ಪಾಟೀಲ್, ಎಲ್.ಟಿ.ಪಾಟೀಲ್, ಪ.ಪಂ ಅಧ್ಯಕ್ಷರಾದ ಜಯಸುಧಾ ಬೋವಿ, ಉಪಾಧ್ಯಕ್ಷರಾದ ಶ್ರೀಕಾಂತ ಸಾನು, ಪ್ರಮುಖರಾದ ಉಮೇಶ್ ಬಿಜಾಪುರ, ಗುಡ್ಡಪ್ಪ ಕಾತೂರ ಹಾಗೂ ಪಟ್ಟಣ ಪಂಚಾಯತ ಸದಸ್ಯರು, ಸ್ಥಳೀಯ ಮುಖಂಡರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಮಂಜುನಾಥ ಹರಿಜನ.
ನಂಜನಗೂಡು: ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸಮೀಪ…
ನಂಜನಗೂಡು: ಅಪರಿಚಿತ ಕಾರು ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ…
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಯಿಂದ ಗೊಲಗೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆ ಅಪಘಾತದಲ್ಲಿ ಗೊಲಗೇರಿ ಗ್ರಾಮದ ಯುವಕ…
ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್‌ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಭಟ್ಕಳ ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಅವರು 50,000 ಲಂಚ ಸ್ವೀಕರಿಸುತ್ತಿದ್ದ ವೇಳೆ…
ಗೌರಿಬಿದನೂರು ನಗರದ ವಿನಾಯಕ ನಗರದ ವಾಸಿ ಪದ್ಮ ಜೈನ್ (59) ಎಂಬುವವರ 50 ಗ್ರಾಂ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ…