ಪ್ರಯಾಣಿಕನ್ನೊಬ್ಬ ಬಸ್ ಹತ್ತುವಂತಹ ಸಂದರ್ಭದಲ್ಲಿ ಖದೀಮನು ಗುಂಪಿನಲ್ಲಿ ತಿಳಿಯದ ಹಾಗೆ ಪ್ರಯಾಣಿಕನ ಪರ್ಸನ್ನು ಕದ್ದಿರುತ್ತಾನೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.
ಹುಬ್ಬಳ್ಳಿ ಗ್ರಾಮಾಂತರ ಭಾಗ-1 ಡಿಪೋಗೆ ಸೇರಿದಂತಹ ಎನ್.ಡಬ್ಲ್ಯೂ.ಕೆ.ಎಸ್.ಆರ್.ಟಿ.ಸಿ ಬಸ್ ಹುಬ್ಬಳ್ಳಿಯ ಹೊಸೂರಿನಲ್ಲಿರುವ ವಾಣಿವಿಲಾಸ ಸರ್ಕಲ್ ನಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವಂತಹ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂಬುದು ತಿಳಿದು ಬಂದಿರುತ್ತದೆ.
ಈ ಘಟನೆಗೆ ಸಂಬಂಧಪಟ್ಟಂತೆ ಠಾಣೆಯಲ್ಲಿ ದೂರು ದಾಖಲಾಗಿರುವ ಬಗ್ಗೆ ಯಾವುದೇ ಮಾಹಿತಿ ದೊರೆತಿರುವುದಿಲ್ಲ ಆದರೆ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ವೈರಲಾಗುತ್ತಿದೆ.