ಮುಂಡಗೋಡ : ತಾಲೂಕಿನ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೆಂಕಟೇಶ್ ಸುಬ್ರಾಯ ಪಟಗಾರ (ಜಿಲ್ಲಾ ಯೋಜನಾ ಉಪ ಸಮನ್ವಯಾಧಿಕಾರಿ ಸಮಗ್ರ ಶಿಕ್ಷಣ ಕರ್ನಾಟಕ, ಶಿರಸಿ) ಅವರಿಗೆ ಉಪನಿರ್ದೇಶಕರು (ಯೋಜನೆ) ಹುದ್ದೆಗೆ ಬಡ್ತಿ ನೀಡಲಾಗಿದೆ.ಕಳೆದ 8 ತಿಂಗಳುಗಳಿಂದ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಇವರನ್ನು ಉಪ ನಿರ್ದೇಶಕರು(ಯೋಜನೆ) ಅಪರ ಆಯುಕ್ತರ ಕಚೇರಿ,ಕಲಬುರ್ಗಿಗೆ ಸ್ಥಳ ನಿಯುಕ್ತಿಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ( ಆಡಳಿತ).ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಆದೇಶ ಹೊರಡಿಸಿದೆ.
ತಾಲೂಕಿಗೆ ಕಾಯಂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಬರುವುದು ಯಾವಾಗ ?
ಮುಂಡಗೋಡ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳೆ ಅತಿ ಹೆಚ್ಚು ಆಡಳಿತ ನಡೆಸಿದ್ದುಂಟು ಹೀಗಾಗಿ ತಾಲೂಕಿನ ಶೈಕ್ಷಣಿಕ ವ್ಯವಸ್ಥೆ ಕುಂಠಿತಗೊಳ್ಳುವುದು ಸಹಜ ಆದ್ದರಿಂದ ಕ್ಷೇತ್ರದ ಶಾಸಕರು ಹಾಗೂ ಸಚಿವರು ಆದ ಶಿವರಾಮ ಹೆಬ್ಬಾರ್ ಅವರು ಈ ಬಗ್ಗೆ ಸ್ವಲ್ಪ ಗಮನ ಹರಿಸಿ ತಾಲೂಕಿಗೆ ಕಾಯಂ ಕ್ಷೇತ್ರ ಶಿಕ್ಷಣಾಧಿಕಾರಿ ಇರುವಂತೆ ನೋಡಿಕೊಳ್ಳಬೇಕಾಗಿದೆ.
ವರದಿ: ಮಂಜುನಾಥ ಹರಿಜನ