Latest

ಮುಂಡಗೋಡದ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಪಟಗಾರ ಅವರಿಗೆ ಡಿಡಿಪಿಐ ಹುದ್ದೆಗೆ ಬಡ್ತಿ.!

ಮುಂಡಗೋಡ :  ತಾಲೂಕಿನ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೆಂಕಟೇಶ್ ಸುಬ್ರಾಯ ಪಟಗಾರ (ಜಿಲ್ಲಾ ಯೋಜನಾ ಉಪ ಸಮನ್ವಯಾಧಿಕಾರಿ ಸಮಗ್ರ ಶಿಕ್ಷಣ ಕರ್ನಾಟಕ, ಶಿರಸಿ) ಅವರಿಗೆ ಉಪನಿರ್ದೇಶಕರು (ಯೋಜನೆ) ಹುದ್ದೆಗೆ ಬಡ್ತಿ ನೀಡಲಾಗಿದೆ.ಕಳೆದ 8 ತಿಂಗಳುಗಳಿಂದ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಇವರನ್ನು ಉಪ ನಿರ್ದೇಶಕರು(ಯೋಜನೆ) ಅಪರ ಆಯುಕ್ತರ ಕಚೇರಿ,ಕಲಬುರ್ಗಿಗೆ ಸ್ಥಳ ನಿಯುಕ್ತಿಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ( ಆಡಳಿತ).ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಆದೇಶ ಹೊರಡಿಸಿದೆ.

ತಾಲೂಕಿಗೆ ಕಾಯಂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಬರುವುದು ಯಾವಾಗ ?
ಮುಂಡಗೋಡ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳೆ ಅತಿ ಹೆಚ್ಚು ಆಡಳಿತ ನಡೆಸಿದ್ದುಂಟು ಹೀಗಾಗಿ ತಾಲೂಕಿನ ಶೈಕ್ಷಣಿಕ ವ್ಯವಸ್ಥೆ ಕುಂಠಿತಗೊಳ್ಳುವುದು ಸಹಜ ಆದ್ದರಿಂದ ಕ್ಷೇತ್ರದ ಶಾಸಕರು ಹಾಗೂ ಸಚಿವರು ಆದ ಶಿವರಾಮ ಹೆಬ್ಬಾರ್ ಅವರು ಈ ಬಗ್ಗೆ ಸ್ವಲ್ಪ ಗಮನ ಹರಿಸಿ ತಾಲೂಕಿಗೆ ಕಾಯಂ ಕ್ಷೇತ್ರ ಶಿಕ್ಷಣಾಧಿಕಾರಿ ಇರುವಂತೆ ನೋಡಿಕೊಳ್ಳಬೇಕಾಗಿದೆ.
ವರದಿ: ಮಂಜುನಾಥ ಹರಿಜನ

kiran

Recent Posts

ಬೈಕ್ ಟಿಪ್ಪರ್ ನಡುವೆ ಡಿಕ್ಕಿ ಬೈಕ್ ಸವಾರ ಸಾವು

ನಂಜನಗೂಡು: ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸಮೀಪ…

1 month ago

ಅಪರಿಚಿತ ಕಾರು ಡಿಕ್ಕಿ; ಐವರಿಗೆ ಗಂಭೀರ ಗಾಯ, ಓರ್ವ ಮಹಿಳೆ ಸ್ಥಳದಲ್ಲೇ ಸಾವು.

ನಂಜನಗೂಡು: ಅಪರಿಚಿತ ಕಾರು ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ…

1 month ago

ರಸ್ತೆ ಅಪಘಾತ; ಗೊಲಗೇರಿ ಗ್ರಾಮದ ಯುವಕ ಸಾವು.

ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಯಿಂದ ಗೊಲಗೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆ ಅಪಘಾತದಲ್ಲಿ ಗೊಲಗೇರಿ ಗ್ರಾಮದ ಯುವಕ…

1 month ago

ಕುಡಿಯುವ ನೀರಿನ ಬಿಲ್ ಪಾವತಿ ಮಾಡಬೇಡಿ -ಮಾಜಿ ಶಾಸಕ ಹರ್ಷವರ್ಧನ್

ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್‌ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ…

1 month ago

ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಭಟ್ಕಳ ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಅವರು 50,000 ಲಂಚ ಸ್ವೀಕರಿಸುತ್ತಿದ್ದ ವೇಳೆ…

1 month ago

ಮಟ-ಮಟ ಮಧ್ಯಾಹ್ನ‌ ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿ ‌

ಗೌರಿಬಿದನೂರು ನಗರದ ವಿನಾಯಕ ನಗರದ ವಾಸಿ ಪದ್ಮ ಜೈನ್ (59) ಎಂಬುವವರ 50 ಗ್ರಾಂ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ…

1 month ago