ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ನಾರಾಯಣಪುರದ ಗ್ರಾಮ ಪಂಚಾಯಿತಿ ಪಿಡಿಒ ಈರಣ್ಣ ಗಾಣಿಗಿ, ಪಂಚಾಯಿತಿ ವ್ಯಾಪ್ತಿಯ ಮುನವಳ್ಳಿ ಗ್ರಾಮದ ಸಂಗಪ್ಪ ಕಿವುಡನ ಅವರಿಂದ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದಿದ್ದಾರೆ.
ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಅತಿಯಾದ ಮಳೆಯಿಂದ ಸಂಗಪ್ಪ ಅವರ ಮನೆ ಹಾನಿಗೊಳಗಾಗಿತ್ತು. ಮನೆ ಹಾನಿಗೆ ಪರಿಹಾರ ನೀಡುವಂತೆ ಅರ್ಜಿ ಸಲ್ಲಿಸಿದ್ದ ಸಂಗಪ್ಪ ಅವರನ್ನು ಫಲಾನುಭವಿಯಾಗಿ ಆಯ್ಕೆ ಮಾಡಲಾಗಿತ್ತು. ಆದರೆ ಮನೆ ನಿರ್ಮಾಣಕ್ಕೆ ವರ್ಕ್ ಆರ್ಡರ್ ನೀಡಲು ಒಟ್ಟು 50 ಸಾವಿರ ರೂ.ಗೆ ಬೇಡಿಕೆಯಿಟ್ಟಿದ್ದರು. ನವಂಬರ್ 10 ರಂದು ಮುಂಗಡ ಹಣವಾಗಿ 20 ಸಾವಿರ ರೂ. ಹಣ ಪಿಡಿಒ ಪಡೆದ್ದರು.
ಇನ್ನೂ 20 ಸಾವಿರ ಹಣ ಪಡೆಯುತ್ತಿದ್ದ ವೇಳೆ ಪಿಡಿಒ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.