ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಪಕ್ಷವು ದಿಗ್ವಿಜಯ ಸಾಧಿಸಿದೆ.
ಚುನಾವಣೆಯ ಹೊಸ್ತಿಲಲ್ಲಿ ಟಿಕೆಟ್ ಕೈತಪ್ಪಿದ ಕಾರಣ ಪಕ್ಷದಿಂದ ಪಕ್ಷಕ್ಕೆ ಜಿಗಿದಿದ್ದ ಅನೇಕರಿಗೆ ತೀವ್ರ ಮುಖಭಂಗವಾಗಿದ್ದು ಪಕ್ಷಾಂತರಿಗಳಿಗೆ ಜನ ಮಣೆ ಹಾಕಿಲ್ಲ.
ಸೋತ ಪ್ರಮುಖರು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ವಿ. ಸೋಮಣ್ಣ, ಗೋವಿಂದ್ ಕಾರಜೋಳ, ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಿ.ಟಿ. ರವಿ, ಹಾಸನದಲ್ಲಿ ಪ್ರೀತಂ ಗೌಡ, ವಿರಾಜಪೇಟೆಯಲ್ಲಿ ಕೆ.ಜಿ. ಬೋಪಯ್ಯ, ಮಡಿಕೇರಿಯಲ್ಲಿ ಅಪ್ಪಚ್ಚು ರಂಜನ್, ಹೊನ್ನಾಳಿಯಲ್ಲಿ ಎಂ.ಪಿ. ರೇಣುಕಾಚಾರ್ಯ ಸೋತ ಪ್ರಮುಖರು.
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಕೆ.ಆರ್. ನಗರ ಜೆಡಿಎಸ್ ಅಭ್ಯರ್ಥಿ ಸಾರಾ ಮಹೇಶ್, ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ, ಬೀದರ್ ದಕ್ಷಿಣದಲ್ಲಿ ಬಂಡೆಪ್ಪ ಕಾಶೆಂಪೂರ್ ಸೋತಿದ್ದಾರೆ.
ಪ್ರಭಾವಿಗಳಿಗೆ ಮಣೆ ಹಾಕದ ಜನತೆ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜನತೆ ಬಿಜೆಪಿ ಸರ್ಕಾರದಲ್ಲಿದ್ದ ಪ್ರಭಾವಿ ಸಚಿವರಿಗೂ ಸಹ ಮಣೆ ಹಾಕಿಲ್ಲ. ಚುನಾವಣೆಯಲ್ಲಿ ಸಚಿವರಾದ ಶ್ರೀರಾಮುಲು, ಸೋಮಣ್ಣ, ಬಿ.ಸಿ. ಪಾಟೀಲ್, ಗೋವಿಂದ ಕಾರಜೋಳ ಹಾಗೂ ನಾರಾಯಣಗೌಡಾಗೆ ಜನತೆ ಸೋಲಿನ ರುಚಿ ತೋರಿಸಿದ್ದಾರೆ.