ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಣೆ ಮಾಡಲಾಗುತ್ತಿರುವ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಸುಮಾರು 75 ಪ್ಯಾಕೆಟ್‌ಗಳಷ್ಟು ಪಡಿತರ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.
ಆಹಾರ ಇಲಾಖೆ ಮತ್ತು ಪೊಲೀಸರ ಸಂಯುಕ್ತ ದಾಳಿ
ಅಕ್ರಮ ಅಕ್ಕಿ ಸಾಗಾಟದ ಬಗ್ಗೆ ಖಚಿತ ಮಾಹಿತಿ ಪಡೆದ ರೋಣ ತಾಲೂಕಿನ ಆಹಾರ ಇಲಾಖೆ ಅಧಿಕಾರಿ ಶಾಂತಾ ಚವಡಿ, ಗಜೇಂದ್ರಗಡ ಠಾಣೆ ಪಿಎಸ್‌ಐ ಸೋಮನಗೌಡ ಮತ್ತು ಅವರ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ದಾಳಿಯಲ್ಲಿ ಬಾಲಪ್ಪ ಗೌಡ್ರ ಎಂಬುವವರು ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಪತ್ತೆಯಾಗಿದೆ.
ಬಡಜನರ ಪಡಿತರ ಕಾಳ ಸಂತೆಯಲ್ಲಿ ಮಾರಾಟ
ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಬಡವರ ಹೊಟ್ಟೆ ತುಂಬಲು ಪಡಿತರ ಯೋಜನೆಗಳನ್ನು ರೂಪಿಸುತ್ತಿದೆ. ಆದರೆ ಗಜೇಂದ್ರಗಡ, ಕೊಪ್ಪಳ ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ಈ ಪಡಿತರ ಧಾನ್ಯಗಳು ಕಾಳಬಜಾರಿನಲ್ಲಿ ಮಾರಾಟವಾಗುತ್ತಿರುವುದು ಗಂಭೀರ ಆತಂಕ ಹುಟ್ಟಿಸಿದೆ.
ಅಕ್ರಮ ಅಕ್ಕಿ ಸಾಗಾಟದ ಮಾಫಿಯಾಗೆ ಬಲೆ ಬೀಸಿದ ಪೊಲೀಸರು
ಈ ಪ್ರಕರಣದಲ್ಲಿ ಇನ್ನಷ್ಟು ಕಿಂಗ್‌ಪಿನ್‌ಗಳು ಇದ್ದ ಸಾಧ್ಯತೆ ಇದ್ದು, ಪೊಲೀಸರ ತಂಡ ಈಗ ಅಕ್ರಮ ಪಡಿತರ ಅಕ್ಕಿ ಸಾಗಾಟದ ಜಾಲವನ್ನು ಪತ್ತೆ ಹಚ್ಚಲು ಮುಂದಾಗಿದೆ. ಗಜೇಂದ್ರಗಡದಲ್ಲಿ ಈ ರೀತಿಯ ದಂಧೆ ತಡೆಯಲು ಕಾನೂನು ರಕ್ಷಣಾ ಸಂಸ್ಥೆಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿವೆ.
ಹಾಸನ ಜಿಲ್ಲೆಯ ಅಟ್ಟಾವರ ಗ್ರಾಮದಲ್ಲಿ ಸಾಲದ ಒತ್ತಡ ಮತ್ತು ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಮೋಸಕ್ಕೆ ಒಳಗಾಗಿ ಮನನೊಂದ ವ್ಯಕ್ತಿಯೊಬ್ಬ ವಿಷ ಸೇವಿಸಿ…
ಆಗ್ನೇಯ ದೆಹಲಿಯ ಗೋವಿಂದಪುರಿಯಲ್ಲಿ ನಡೆದ ಗ್ಯಾಂಗ್‌ಸ್ಟರ್ ಶೈಲಿಯ ಎಟಿಎಂ ದರೋಡೆ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಮುಸುಕುಧಾರಿಗಳಾದ ನಾಲ್ವರು ಕಳ್ಳರು, ಕ್ರೇನ್…
ಮೈಸೂರು ನಗರ, ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಗಂಭೀರ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೈಸೂರು ನಗರ ಪೊಲೀಸ್ ಆಯುಕ್ತರ…
ಬಳ್ಳಾರಿ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಕೂಡ್ಲಿಗಿ ತಾಲ್ಲೂಕಿನ ಸರ್ಕಾರಿ ಶಾಲೆಯೊಂದರ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.…
ಮಹಾರಾಷ್ಟ್ರದ ವಲಸೆ ಕಾರ್ಮಿಕರು ತಮಿಳುನಾಡಿನಲ್ಲಿ ಉದ್ಯೋಗವಿಲ್ಲದೇ ಪರದಾಡುತ್ತಿರುವ ಹೃದಯಕಂಪಿ ಘಟನೆ ಬೆಳಕಿಗೆ ಬಂದಿದೆ. ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು, ಪುರುಷರು,…
ಹಾವೇರಿ: ಶುಶ್ರೂಷಕಿ ಸ್ವಾತಿ ಬ್ಯಾಡಗಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಯಾಜ್ ಇಮಾಮ್‌ಸಾಬ್ ಬೆಣ್ಣೆಗೇರಿಗೆ ಪೊಲೀಸ್ ಠಾಣೆಯ ಸೆಲ್‌ನಲ್ಲಿ ಅನಧಿಕೃತವಾಗಿ…