ಉಡುಪಿ ನಗರದ ಕಾಲೇಜಿನ ಶೌಚಗೃಹದಲ್ಲಿ ಹಿಂದೂ ಹುಡುಗಿಯರ ವಿಡಿಯೋ ಸೆರೆಹಿಡಿದ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿಯ ವಿಚಾರದ ಕುರಿತಾಗಿ ವಿದ್ಯಾರ್ಥಿನಿಯರ ಮಕ್ಕಳಾಟವನ್ನ, ಬಿಜೆಪಿ ರಾಜಕೀಯ ಕಳ್ಳಾಟವನ್ನಾಗಿ ಬಳಸಿಕೊಳ್ಳುತ್ತಿದೆ ಎಂದು ಟ್ವೀಟ್ ಮಾಡಿದ್ದರು. ಟ್ವೀಟ್ ಮಾಡಿದ ಬೆನ್ನಲ್ಲೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದನ್ನ ಶಕುಂತಲಾ (ಬಿಜೆಪಿ ಕಾರ್ಯಕರ್ತೆ) ಶೇರ್ ಮಾಡಿ ಮರು ಟ್ವೀಟ್ ಮೂಲಕ ಪೋಸ್ಟ್ ಮಾಡಿದ್ದರು.
ಜೊತೆಗೆ, ಟ್ವೀಟ್ಗೆ ಪ್ರತಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೊಸೆ ಅಥವಾ ಹೆಂಡತಿಗೆ ಆಗಿದ್ರೆ ಹೀಗೆ ಹೇಳುತ್ತಿದ್ದರಾ ಎಂದು ಪ್ರಶ್ನೆ ಮಾಡಿದ್ದಾರೆ. ಸಿಎಂ ವಿರುದ್ಧ ಅವಹೇಳನಕಾರಿಯಾಗಿ ಟ್ವೀಟ್ ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿತ್ತು. ದೂರು ದಾಖಲಿಸಿಕೊಂಡು ಹೈಗ್ರೌಂಡ್ಸ್ ಪೊಲೀಸರು ಬಿಜೆಪಿ ಕಾರ್ಯಕರ್ತೆ ಶಕುಂತಲಾಳನ್ನ ಬಂಧಿಸಿದ್ದಾರೆ.
ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್ನವರ ಪ್ರಕಾರ ಮಕ್ಕಳಾಟವಂತೆ..@siddaramaiah ನವರ ಸೊಸೆ or ಹೆಂಡ್ತಿ ಅವ್ರ ವಿಡಿಯೋವನ್ನು ಇದೆ ತರ ಮಾಡಿದ್ರೆ
ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ? pic.twitter.com/jP0QTKvL5R— ಶಕುಂತಲ🪷Shakunthala (@ShakunthalaHS) July 25, 2023
ಬಿಜೆಪಿ ಕಾರ್ಯಕರ್ತೆ ಶಕುಂತಲಾ ಬಂಧನವಾದ ಬೆನ್ನಲ್ಲಿಯೇ ಹಲವು ಬಿಜೆಪಿ ನಾಯಕರು ಪೊಲೀಸ್ ಠಾಣೆಗೆ ತೆರಳಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ನಂತರ, ಸ್ಟೇಷನ್ ಬೇಲ್ ಮೇಲೆ ಶಕುಂತಲಾ ಅವರನ್ನು ಬಿಡುಗಡೆ ಮಾಡಲಾಗಿದೆ.