ಕಾರವಾರ: ದಕ್ಷ ಅಧಿಕಾರಿ ಎಂದೇ ಜನಮನ್ನಣೆಗಳಿಸಿದ್ದ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ನಿಯೋಜನೆಗೊಳಿಸಲಾಗಿದೆ.ಸರ್ಕಾರ ಒಟ್ಟು 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು ಅದರಲ್ಲಿ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು ಸೇರಿದ್ದಾರೆ ಇವರನ್ನು ಬೆಂಗಳೂರಿಗೆ ವರ್ಗಾಯಿಸಲಾಗಿದ್ದು ಇವರನ್ನು ಯುವಜನ ಮತ್ತು ಕ್ರೀಡಾ ಇಲಾಖೆಯ ಕಮಿಷನರ್ ಆಗಿ ನೇಮಕ ಮಾಡಲಾಗಿದೆ.
ವರದಿ: ಮಂಜುನಾಥ ಹರಿಜನ.