
ಮುಂಡಗೋಡ: ಪಟ್ಟಣದಲ್ಲಿ ಗೋ ಹತ್ಯೆ ನಡೆದಿದೆ ಎಂದು ಆರೋಪಿಸಿ ಹಿಂದೂಪರ ಸಂಘಟನೆ ಕಾಯಕರ್ತರು ಗುರುವಾರ ಮಸೀದಿ ಬಳಿ ಸೇರಿದ್ದರಿಂದ ಕೆಲಕಾಲ ಬಿಗುವಿನ ವಾತಾವ ರಣ ಸೃಷ್ಟಿಯಾಗಿತ್ತು ಮುನ್ನೆಚ್ಚರಿಕೆ ಕ್ರಮ ವಾಗಿ ಸಿಪಿಐ ರಂಗನಾಥ ನೀಲಮ್ಮನವರ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದರು.
ಗೋಹತ್ಯೆ ನಡೆದ ಆರೋಪ : ಕಠಿಣ ಕ್ರಮಕ್ಕೆ ಆಗ್ರಹ
ಗೋ ಹತ್ಯೆ ಮಾಡಲಾಗಿದೆ ಎಂದು ಮಸೀದಿ ಹಿಂಬದಿ ಕಟ್ಟಡ ಪಕ್ಕದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ಎಬಿವಿಪಿ ಹಾಗೂ ಹಿಂದೂಪರ ಸಂಘಟನೆಯವರಿಗೆ ಮಾಹಿತಿ ನೀಡಿದ ಕೆಲವೇ ನಿಮಿಷದಲ್ಲಿ ನೂರಾರು ಕಾರ್ಯಕರ್ತರು ಜಮಾಯಿಸಿದರು. ಸ್ಥಳಕ್ಕೆ ಸಿಪಿಐ ರಂಗನಾಥ್ ನೀಲಮ್ಮನವರ ಹಾಗೂ ಪಿಎಸ್‌ಐ ಪರಶುರಾಮ ಮಿರ್ಜಗಿ
ಭೇಟಿ ನೀಡಿದ ವೇಳೆ ಅಲ್ಲಿ ದನದ ಮಾಂಸ ಇಟ್ಟಿರುವುದು ಪತ್ತೆಯಾಗಿದ್ದು, ಮಾಂಸ ವಶಕ್ಕೆ ಪಡೆದು ಪಶು ಆಸ್ಪತ್ರೆಗೆ ಪರೀಕ್ಷೆಗೆ ಕಳಿಹಿಸಿದರು.
ಪ್ರತಿಭಟನೆ: ಈ ಮಧ್ಯೆ ಪ್ರಕರಣ ಖಂಡಿಸಿ ಬಿಜೆಪಿ, ಹಿಂದೂ ಜಾಗರಣ ವೇದಿಕೆ,ಎಬಿವಿಪಿ, ಬಜರಂಗದಳ ಹಾಗೂ ಶ್ರೀರಾಮ ಸೇನೆಯ ಕಾರ್ಯಕರ್ತರು ಶಿವಾಜಿ ಸರ್ಕಲ್‌ನಲ್ಲಿ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಘಟನೆಗೆ ಕಾರಣರಾದವರನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ
ಕೈಗೊಳ್ಳಬೇಕು. ಆರೋಪಿಗಳನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಪೋಲಿಸರಿಗೆ ಮನವಿ ಸಲ್ಲಿಸಿದರು. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಮಂಡಳ ಅಧ್ಯಕ್ಷ ಮಂಜುನಾಥಪಾಟೀಲ, ಪ.ಪಂ ಸದಸ್ಯ ಫಣಿರಾಜ ಹದಳಗಿ, ಮುಖಂಡರಾದ ಪ್ರಕಾಶ ಬಡಿಗೇರ, ಶಂಕರ ಲಮಾಣಿ, ವಿಶ್ವನಾಥ ನಾಯರ್, ಅಯ್ಯಪ್ಪ ಭಜಂತ್ರಿ, ರಾಜೇಶ ರಾವ್, ಮಂಜುನಾಥ ಶೇಟ್, ಕೊಟ್ಟೆನ ಹಿರೇಮಠ, ತಂಗಮ್ಮ ಚಿನ್ನನ್, ಭರತ ಹದಳಗಿ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.
ಇಬ್ಬರ ವಿರುದ್ಧ ಪ್ರಕರಣ ದಾಖಲು: ಘಟನೆಗೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಪಟ್ಟಣದ ದೇಶಪಾಂಡೆ ನಗರದ ಜಹೀರ ಆತ್ಮದ ಮೈನುದ್ದಿನ್ ಬೇಪಾರಿ(32) ಹಾಗೂ ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾರೆ.