
ಸ್ಪಾ ಕೇಂದ್ರವೊಂದರಲ್ಲಿ ವೈಧ ವ್ಯವಹಾರದ ಹೆಸರಿನಲ್ಲಿ ನಡೆಯುತ್ತಿದ್ದ ಅಕ್ರಮ ವೇಶ್ಯವಾಟೆ ಬಯಲಾಗಿರುವ ಘಟನೆ ಜಿಲ್ಲೆಯ ಪ್ರತಿಷ್ಠಿತ ಹೋಟೆಲ್‌ನಲ್ಲಿ ನಡೆದಿದೆ. ಹಲವು ದಿನಗಳಿಂದ ಈ ಸ್ಪಾದ ಬಗ್ಗೆ ಸಾರ್ವಜನಿಕರಿಂದ ಪೊಲೀಸರಿಗೆ ಶಂಕಾಸ್ಪದ ಮಾಹಿತಿ ಲಭಿಸುತ್ತಿದ್ದ ಹಿನ್ನೆಲೆಯಲ್ಲಿ, ಎಸ್ಪಿ ಡಾ. ವಿಜಯ ಶೋಭರಾಣಿ ಅವರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ.
ದಂಧೆಯ ಬಗ್ಗೆ ಖಚಿತ ಸುದ್ದಿ ಮೇರೆಗೆ ಸಿಐಇಎನ್ ವಿಭಾಗದ ಪೊಲೀಸರು ಸ್ಥಳಕ್ಕೆ ಧಾವಿಸಿ ದಾಳಿ ನಡೆಸಿದ್ದು, ವೇಶ್ಯಾವಾಟೆಯಲ್ಲಿ ತೊಡಗಿದ್ದ ಬಳ್ಳಾರಿ ಮೂಲದ ಇಬ್ಬರು ಮತ್ತು ಗಂಗಾವತಿಯ ಮೂಲದ ಒಬ್ಬ ಮಹಿಳೆಯನ್ನು ಬಂಧಿಸಿದ್ದಾರೆ. ಜೊತೆಗೆ ಸ್ಪಾ ಕೇಂದ್ರವನ್ನು ನಿರ್ವಹಿಸುತ್ತಿದ್ದ ಬಿ.ಎಂಡಿ ಮತೀಲ್ ಹಾಗೂ ಮೈನಜ್ ಎಂಬವರನ್ನು ವಶಕ್ಕೆ ತೆಗೆದುಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಈ ಘಟನೆಯ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಇನ್ನಷ್ಟು ಆರೋಪಿಗಳು ಈ ಜಾಲದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸ್ ತನಿಖೆ ಮುಂದುವರೆದಿದೆ.