ಪಿಎಸ್‌ಐ (ಸಬ್ ಇನ್‌ಸ್ಪೆಕ್ಟರ್) ಹುದ್ದೆಗಳ ನೇಮಕಾತಿಯಲ್ಲಿ ನಡೆದಿರುವ
ಅಕ್ರಮಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಸಿಐಡಿ ತಂಡ ಬಂಧಿಸಿದೆ.ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲ್ಲೂಕು ಹಿಪ್ಪರಗಾ ಗ್ರಾಮದ ನಿವಾಸಿ ಸುಪ್ರಿಯಾ ಹುಂಡೆಕರ್ (26) ಬಂಧಿತ ಆರೋಪಿಯಾಗಿದ್ದು, ಕಲ್ಯಾಣ ಕರ್ನಾಟಕ ಮಹಿಳಾ ಖೋಟಾದಲ್ಲಿ
ಸುಪ್ರೀಯಾ ಮೊದಲ ಸ್ಥಾನ ಪಡೆದಿದ್ದಳು. ಸುಪ್ರಿಯಾ ವಿಚಾರಣೆ ಬಳಿಕ ಅಕ್ರಮವಾಗಿ ಪರೀಕ್ಷೆ ಬರೆದಿರುವ ಮತ್ತಷ್ಟು ಜನರ ಮಾಹಿತಿ ಲಭ್ಯವಾಗಬಹುದು ಎಂದು ಸಿಐಡಿ ಅಧಿಕಾರಿಗಳು ನಿರೀಕ್ಷಿಸಿದ್ದಾರೆ. ಇನ್ನು ಈ ಮೂಲಕ ಕಲಬುರಗಿಯಲ್ಲಿ ಪಿಎಸ್‌ಐ ಪ್ರಕರಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳ ಸಂಖ್ಯೆ 52ಕ್ಕೆ ಏರಿಕೆಯಾಗಿದೆ.