ಭಾರತ್ ಜೋಡೋ ಯಾತ್ರೆ ವೇಳೆ ಮಾಡಿದ ಭಾಷಣದಲ್ಲಿ ಪ್ರಸ್ತಾಪಿಸಿದ ಲೈಂಗಿಕ ಕಿರುಕುಳ ಸಂತ್ರಸ್ತರ ಬಗ್ಗೆ ಮಾಹಿತಿ ಪಡೆಯಲು ಪೊಲೀಸರು ನೀಡಿದ ನೋಟಿಸ್ಗೆ ಸಂಬಂಧಿಸಿದಂತೆ ವಿಶೇಷ ಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಸಾಗರ್ ಪ್ರೀತ್ ಹೂಡಾ ಭಾನುವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರು. ಭಾನುವಾರ ಮುಂಜಾನೆ ರಾಹುಲ್ ಗಾಂಧಿ ನಿವಾಸಕ್ಕೆ ಆಗಮಿಸಿದ ಹೂಡಾ ಭಾರತ್ ಜೋಡೋ ಯಾತ್ರೆಯ ವೇಳೆ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಲೈಂಗಿಕ ಕಿರುಕುಳ ಸಂತ್ರಸ್ತರ ಬಗ್ಗೆ ವಿವರ ಕೇಳಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಅಧಿಕಾರಿ, ರಾಹುಲ್ ಗಾಂಧಿಯವರೊಂದಿಗೆ ಮಾತನಾಡಿದ್ದೇವೆ. ಸ್ವಲ್ಪ ಸಮಯ ಬೇಕು ಎಂದಿದ್ದಾರೆ. ನಾವು ನೀಡಲಾದ ನೋಟಿಸ್ ನ್ನು ಅವರ ಕಚೇರಿಯಿಂದ ಇಂದು ಸ್ವೀಕರಿಸಲಾಗಿದೆ.
ವಿಚಾರಣೆಯ ಅಗತ್ಯವಾದರೆ ನಂತರ ಮಾಡುತ್ತೇವೆ ಎಂದು ಹೂಡಾ ಹೇಳಿದರು. ಭಾರತ್ ಜೋಡೋ ಯಾತ್ರೆ ಸುದೀರ್ಘ ಯಾತ್ರೆಯಾಗಿತ್ತು. ಅನೇಕ ಜನರನ್ನು ಭೇಟಿಯಾಗಿದ್ದು, ಅದನ್ನು ಸಂಕಲಿಸಲು ಸಮಯ ಬೇಕಾಗುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಶೀಘ್ರದಲ್ಲೇ ಮಾಹಿತಿ ನೀಡುವುದಾಗಿ ಅವರು ನಮಗೆ ಭರವಸೆ ನೀಡಿದ್ದಾರೆ ಮತ್ತು ಮಾಹಿತಿ ಪಡೆದ ತಕ್ಷಣ ಮುಂದಿನ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದರು.

error: Content is protected !!