ಬಳ್ಳಾರಿ ಜಿಲ್ಲೆಯ ತೋರಣಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುಷ್ಕರ್ಮಿಯೊಬ್ಬ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬಹಿರಂಗವಾಗಿದೆ. ಈ ಘಟನೆ ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನ ಪುಸುಲಾಯಿಸಿ ಕರೆದೊಯ್ದು ನಡೆದಿದೆ.

ಪೊಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲು
ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಈ ಸಂಬಂಧ ಆರೋಪಿ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಈಗ ವೈರಲ್ ಆಗಿದೆ.

ಮಗು ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ
ಹತ್ತು ವರ್ಷಗಳ ಹಿಂದೆ ಕೆಲಸಕ್ಕಾಗಿ ಬಂದು ಖಾಸಗಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ದಂಪತಿಯ ಮಗುವೇ ಈ ದೌರ್ಜನ್ಯಕ್ಕೆ ಬಲಿಯಾಗಿದೆ. ಲೈಂಗಿಕ ದಾಳಿಯಿಂದಾಗಿ ಮಗುವಿಗೆ ತೀವ್ರ ಆಂತರಿಕ ಗಾಯಗಳಾಗಿ, ರಕ್ತಸ್ರಾವ ಉಂಟಾಗಿದೆ. ಮಗುವಿಗೆ ತಕ್ಷಣವೇ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಶಸ್ತ್ರಚಿಕಿತ್ಸೆ ಮೂಲಕ ಪ್ರಾಣಾಪಾಯದಿಂದ ಪಾರಾಗಿದೆ.

ಪ್ರತಿಭಟನೆ ಮತ್ತು ಆಗ್ರಹ
ಈ ಗಂಭೀರ ಘಟನೆಯ ಖಂಡನೆಗಾಗಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದೆ. ಸಂಘಟನೆಯ ಮಹಿಳೆಯರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಆರೋಪಿಗೆ ತಕ್ಷಣ ಕಠಿಣ ಶಿಕ್ಷೆ ನೀಡಲು ಆಗ್ರಹಿಸಿದ್ದಾರೆ. ಜೊತೆಗೆ, ಈ ರೀತಿಯ ಅಪರಾಧಗಳನ್ನು ತಡೆಯಲು ಸೂಕ್ತ ಕಾನೂನು ರೂಪಿಸಬೇಕೆಂದು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!