ಮುಂಡಗೋಡ:- 2024ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು (RWBCIS) ಉತ್ತರ ಕನ್ನಡ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿರುತ್ತದೆ. ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರು ವಿಮಾ ಕಂತನ್ನು ಪಾವತಿಸಲು ಈ ಹಿಂದೆ ದಿ:31-07-2024 ಕೊನೆಯ ದಿನಾಂಕವೆಂದು ನಿಗದಿಪಡಿಸಲಾಗಿತ್ತು. ಮುಂದುವರೆದು ಘನ ಸರ್ಕಾರದ ಆದೇಶದಲ್ಲಿ ರೈತರ ಹಿತದೃಷ್ಟಿಯಿಂದ ಮುಂಡಗೋಡ ತಾಲೂಕಿನಲ್ಲಿ ಅಡಿಕೆ, ಮಾವು ಮತ್ತು ಶುಂಠಿ ಬೆಳೆಗಳಿಗೆ ಬೆಳೆ ವಿಮಾ ಪ್ರೀಮಿಯಂ ತುಂಬುವ ನೊಂದಣಿ ಅವಧಿಯನ್ನು ದಿ:16-08-2024 ವರೆಗೆ ವಿಸ್ತರಿಸಲಾಗಿದ್ದು, ತಾಲೂಕಿನ ರೈತರು ಇದರ ಸದುಪಯೋಗ ಪಡೆಯಲು ಕೋರಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮುಂಡಗೋಡ ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ಕಛೇರಿ ಅಥವಾ ಹತ್ತಿರದ ಬ್ಯಾಂಕ್ ಶಾಖೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಶ್ರೀ ಕೃಷ್ಣಾ ಟಿ. ಕುಳ್ಳೂರ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ.) ಮುಂಡಗೋಡರವರು ತಿಳಿಸಿದ್ದಾರೆ.