ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಈ ಘಟನೆ ನಡೆದಿದೆ.ಮಹೇಶ ಗೌಡ ಎನ್ನುವನು (28) ಹೊನ್ನಾವರ ತಾಲೂಕಿನ ಹಳದಿಪುರ ಅಗ್ರಹಾರದ ಕಡೆಯಿಂದ ಸಲಕೇರಿ ಕಡೆ ಬರುತ್ತಿದ್ದಾಗ ರಸ್ತೆಯಲ್ಲಿ ಆಕಳು ಅಡ್ಡ ಬಂದ ಕಾರಣ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾನೆ .ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಸೂಕ್ತ ಕಾನೂನು ಕ್ರಮ ಕೈಗೊಂಡಿದ್ದಾರೆ .

ವರದಿ: ಶ್ರೀಪಾದ್ ಎಸ್ ಏಚ್

error: Content is protected !!