ಕನ್ನಡದ KGF ಸರಣಿ ಸಿನಿಮಾ ಜಪಾನ್ ದೇಶದಲ್ಲಿ ಸದ್ದು ಮಾಡ್ತಿದೆ. ದೊಡ್ಡಮಟ್ಟದಲ್ಲಿ ಪ್ರೇಕ್ಷಕರನ್ನು ಸೆಳೀತಿದೆ. ಜುಲೈ 14ಕ್ಕೆ KGF ಚಾಪ್ಟರ್-1 ಹಾಗೂ ಚಾಪ್ಟರ್-2 ಜಪಾನ್ ಪ್ರೇಕ್ಷಕರ ಮುಂದೆ ಹೋಗಿತ್ತು. ಸದ್ಯ ಸಿನಿಮಾ 12 ದಿನ ಪೂರೈಸಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. 2 ವೀಕೆಂಡ್‌ಗಳಲ್ಲಿ ಚಿತ್ರಕ್ಕೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದ್ದು ಸಿನಿಮಾ ಕಲೆಕ್ಷನ್ ಹೆಚ್ಚಾಗಿದೆ.
ರಾಜಮೌಳಿ ನಿರ್ದೇಶನದ ‘RRR’ ಸಿನಿಮಾ ಜಪಾನ್ ಬಾಕ್ಸಾಫೀಸ್‌ನಲ್ಲಿ 120 ಕೋಟಿ ರೂ. ಕಲೆಕ್ಷನ್ ಮಾಡಿತ್ತು. ಇದರ ಬೆನ್ನಲ್ಲೇ ಕನ್ನಡದ ‘KGF’ ಹಾಗೂ ತೆಲುಗಿನ ‘ರಂಗಸ್ಥಳಂ’ ಒಟ್ಟಿಗೆ ಜಪಾನ್ ದೇಶದ ಬೆಳ್ಳಿತೆರೆಗಳ ಮೇಲೆ ಅಪ್ಪಳಿಸಿವೆ. ಮೂರು ಚಿತ್ರಗಳಿಗೆ ಒಳ್ಳೆ ರೆಸ್ಪಾನ್ಸ್ ಸಿಗುತ್ತಿದೆ. ಸಿನಿಮಾ ನೋಡಿದವರೆಲ್ಲಾ ಮೆಚ್ಚಿ ಸೋಶಿಯಲ್ ಮೀಡಿಯಾದಲ್ಲಿ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.
ತೆಲುಗಿನ RRR ಸಿನಿಮಾ ಜಪಾನ್ ದೇಶದಲ್ಲಿ 240ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ರಿಲೀಸ್ ಆಗಿತ್ತು. ಆದರೆ 90 ಸ್ಕ್ರೀನ್‌ಗಳಲ್ಲಿ KGF ಚಾಪ್ಟರ್-1 ಹಾಗೂ 85 ಸ್ಕ್ರೀನ್‌ಗಳಲ್ಲಿ ಚಾಪ್ಟರ್-2 ಆರ್ಭಟ ಶುರುವಾಗಿತ್ತು. 10 ದಿನಕ್ಕೆ ಅಂದಾಜು 20 ಮಿಲಿಯನ್ ಯೆನ್ ಕಲೆಕ್ಷನ್ ಆಗಿದೆಯಂತೆ. ಅಂದರೆ ಭಾರತದ ರೂಪಾಯಿಯಲ್ಲಿ ಅಂದಾಜು 1.16 ಕೋಟಿ ರೂ. ಕಲೆಕ್ಷನ್ ಮಾಡಿದೆ ಎನ್ನಲಾಗ್ತಿದೆ. ಇದೇ ಮೊದಲ ಬಾರಿಗೆ ಕನ್ನಡ ಸಿನಿಮಾವೊಂದು ಜಪಾನ್ ದೇಶದಲ್ಲಿ ರಿಲೀಸ್ ಆಗಿದೆ. ಕನ್ನಡ ಸಿನಿಮಾಗಳ ಬಗ್ಗೆ ಪರಿಚಯವೇ ಇಲ್ಲದ ಜಪಾನೀಯರು ಸಿನಿಮಾ ನೋಡಿ ಖುಷಿಯಾಗಿದ್ದಾರೆ.
12 ಕೋಟಿ ಜನ ಸಂಖ್ಯೆಯ ಪುಟ್ಟ ದೇಶ ಜಪಾನ್. ಅಲ್ಲಿ ಸಿನಿಮಾ ಥಿಯೇಟರ್‌ಗಳು ಚಿಕ್ಕದಾಗಿ ಇರುತ್ತದೆ. ಸಿನಿಮಾ ನೋಡುವವರ ಸಂಖ್ಯೆ ಕೂಡ ಕಡಿಮೆಯೇ ಇರುತ್ತದೆ. ಆದರೂ ಭಾರತದ ಕೆಲ ಸಿನಿಮಾಗಳಿಗೆ ಅಲ್ಲಿ ಒಳ್ಳೆ ರೆಸ್ಪಾನ್ಸ್ ಸಿಕ್ತಿದೆ. ಇದೀಗ KGF ಸರಣಿ ಸಿನಿಮಾಗಳನ್ನು ಕೂಡ ಪ್ರೇಕ್ಷಕರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. 2 ಚಾಪ್ಟರ್ ಸೇರಿ ಈಗಾಗಲೇ 14 ಸಾವಿರಕ್ಕೂ ಅಧಿಕ ಟಿಕೆಟ್‌ಗಳು ಮಾರಾಟವಾಗಿದೆ. ಪ್ರೇಕ್ಷಕರು ಸಲಾಂ ರಾಕಿ ಭಾಯ್ ಎಂದು ಜೈಕಾರ ಹಾಕುತ್ತಿದ್ದಾರೆ.
KGF ಸಿನಿಮಾ ನಿಜಕ್ಕೂ ಜಪಾನ್ ಪ್ರೇಕ್ಷಕರ ಮನಗೆದ್ದಿದೆ. ಚಿತ್ರದ ಸಾಂಗ್ಸ್, ಡೈಲಾಗ್ಸ್‌ನ ಅಲ್ಲಿನ ಪ್ರೇಕ್ಷಕರು ಎಂಜಾಯ್ ಮಾಡುತ್ತಿದ್ದಾರೆ. ಅಲ್ಲಿ ರಾಕಿಭಾಯ್ ಕ್ರೇಜ್ ಜೋರಾಗಿದೆ. ರಾಕಿಭಾಯ್ ರೀತಿ ದೊಡ್ಡ ಸುತ್ತಿಗೆ ಹಿಡಿದು ಅಭಿಮಾನಿಗಳು ಫೋಟೊ ಕ್ಲಿಕ್ಕಿಸಿ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಿದ್ದಾರೆ. ರಾಕಿ, ಅಧೀರ ಲುಕ್ ಪೇಪರ್ ಮಾಸ್ಕ್‌ಗಳನ್ನು ಹಾಕಿಕೊಂಡು ಸಿನಿಮಾ ನೋಡಿ ಖುಷಿಪಡುತ್ತಿದ್ದಾರೆ. ಅದಕ್ಕೆ ಸಂಬಂಧಿಸಿದ ಫೋಟೊಗಳು ವೈರಲ್ ಆಗ್ತಿದೆ.
ನಂಜನಗೂಡು: ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸಮೀಪ…
ನಂಜನಗೂಡು: ಅಪರಿಚಿತ ಕಾರು ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ…
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಯಿಂದ ಗೊಲಗೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆ ಅಪಘಾತದಲ್ಲಿ ಗೊಲಗೇರಿ ಗ್ರಾಮದ ಯುವಕ…
ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್‌ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಭಟ್ಕಳ ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಅವರು 50,000 ಲಂಚ ಸ್ವೀಕರಿಸುತ್ತಿದ್ದ ವೇಳೆ…
ಗೌರಿಬಿದನೂರು ನಗರದ ವಿನಾಯಕ ನಗರದ ವಾಸಿ ಪದ್ಮ ಜೈನ್ (59) ಎಂಬುವವರ 50 ಗ್ರಾಂ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ…