8 ತಿಂಗಳ ಹಿಂದಷ್ಟೇ ಹೆಬ್ಬಾಳ ಠಾಣೆ ವ್ಯಾಪ್ತಿಯ ಸರ್ಕಾರಿ ಶಾಲೆಗೆ ವರ್ಗಾವಣೆಗೊಂಡಿದ್ದ55 ವರ್ಷದ ದೈಹಿಕ ಶಿಕ್ಷಕ ಅಂಜಿನಪ್ಪ, ಹಲವು ತಿಂಗಳಿನಿಂದ ಮಕ್ಕಳಿಗೆ ಪಾಠ ಹೇಳಿಕೊಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಹೆಬ್ಬಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಕಿಯರು ನೀಡಿದ್ದ ಮಾಹಿತಿ ಆಧರಿಸಿ ಶಾಲೆಯ ಮುಖ್ಯ ಶಿಕ್ಷಕರೇ ಠಾಣೆಗೆ ದೂರು ನೀಡಿದ್ದು ದೂರನ್ನಾಧರಿಸಿ ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ. ಸದ್ಯ ಆರೋಪಿ ಶಿಕ್ಷಕ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿ ಅಂಜಿನಪ್ಪ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಂಜಿನಪ್ಪ ಆಟ, ಪಾಠದ ನೆಪದಲ್ಲಿ ಬಾಲಕಿಯರನ್ನು ತನ್ನ ಬಳಿ ಕರೆಸಿಕೊಂಡು ವಿದ್ಯಾರ್ಥಿನಿಯರಿಗೆ ಮುತ್ತು ಕೊಡುವುದು, ಮೈ-ಕೈ, ಮುಟ್ಟಬಾರದ ಜಾಗದಲ್ಲಿ ಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಹೇಳಲಾಗುತಿದೆ.