ಪಟ್ಟಣ: ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಶಿಕ್ಷಕ ಕೆ.ಎಚ್. ಗಿರೀಶ್ ವಿರುದ್ಧ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪವು ಕೇಳಿಬಂದಿದ್ದು, ಈ ಸಂಬಂಧ ಪಟ್ಟಣ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಫೆಬ್ರವರಿ 19ರಂದು ಈ ದೌರ್ಜನ್ಯ ನಡೆದಿದ್ದು, ಘಟನೆ ಸಂಬಂಧ ಕ್ಲಸ್ಟರ್ ಸಂಯೋಜಕಿ ದೀಪಾ ಅವರು ಫೆಬ್ರವರಿ 20ರಂದು ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜು ಅವರಿಗೆ ಶಿಕ್ಷಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ದೂರು ಸಲ್ಲಿಸಿದರು. ಆದರೆ, ಈ ಕುರಿತು ತಕ್ಷಣ ಯಾವುದೇ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಶಿಕ್ಷಕರ ವಿರುದ್ಧ ದೂರು ಬಂದಿದ್ದರೂ ಅಧಿಕಾರಿಗಳು ವಿಲಂಬ ಮಾಡಿದ ಹಿನ್ನೆಲೆಯಲ್ಲಿ ಸ್ಥಳೀಯರು ಮತ್ತು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ದೌರ್ಜನ್ಯ ಆರೋಪಿಗೆ ತಕ್ಷಣ ಕಾನೂನು ಪ್ರಕಾರ ಶಿಷ್ಟ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿದ್ದಾರೆ. ಪ್ರಸ್ತುತ ಆರೋಪಿತ ಶಿಕ್ಷಕ ತಲೆಮರೆಸಿಕೊಂಡಿದ್ದು, ಪೊಲೀಸರು ಅವನ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.
ಈ ಪ್ರಕರಣದಿಂದ ಶಾಲಾ ಮಕ್ಕಳ ಸುರಕ್ಷತೆ ಹಾಗೂ ಶಿಕ್ಷಣ ಸಂಸ್ಥೆಗಳ ಹೊಣೆಗಾರಿಕೆಯನ್ನು ಪ್ರಶ್ನಿಸುವ ಅಗತ್ಯವಿದೆ ಎಂಬ ಮಾತುಗಳು ಮೊಳಗುತ್ತಿವೆ. ಪ್ರಹಾರ ಮುಖ್ಯಶಿಕ್ಷಕನ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.
ಯಾದಗಿರಿ ಜಿಲ್ಲೆ ಗುರುಮಿಟ್ಕಲ್ ತಾಲೂಕು ಸೈದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿಂದಿ ಆಯುವ ಯುವತಿಯರಿಬ್ಬರ ಶವ ನೀಲಹಳ್ಳಿ ಕೆರೆಯಲ್ಲಿ ದಿನಾಂಕ…
ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಕೊತ್ತಗೆರೆ ಗ್ರಾಮದಲ್ಲಿ ನವಜಾತ ಶಿಶುವಿನ ಮಾರಾಟಕ್ಕೆ ಮಧ್ಯಸ್ಥಿಕೆ ವಹಿಸಿದ ಆರೋಪದ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ…
ಬೆಳಗಾವಿಯಲ್ಲಿ ಕನ್ನಡ ಭಾಷೆ ಬಳಸುವಂತೆ ಹೇಳಿದ ಕಾರಣಕ್ಕೆ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿ, ಬಳಿಕ ಆತನ ವಿರುದ್ಧ…
ಕೋಲ್ಕತ್ತಾದ ಕುಮಾರ್ತುಲಿಯ ಗಂಗಾ ನದಿಯ ದಡದಲ್ಲಿ ಇಂದು ಬೆಳಗ್ಗೆ ಭೀಕರ ಘಟನೆ ಬೆಳಕಿಗೆ ಬಂದಿದೆ. ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ನದಿಗೆ…
ವಾಡಾ: ಇಲ್ಲಿನ ಪಾಲಿ ಗ್ರಾಮದ ಬಳಿ ನಡೆದ ಪೊಲೀಸ್ ಕಾರ್ಯಾಚರಣೆಯಲ್ಲಿ ₹14 ಲಕ್ಷ ಮೌಲ್ಯದ ನಕಲಿ ನೋಟುಗಳು ವಶಪಡಿಸಿಕೊಳ್ಳಲಾಗಿದೆ. ಖಚಿತ…
ತುಮಕೂರು ಜಿಲ್ಲೆಯಲ್ಲಿ ಶಿಶು ಮಾರಾಟ ಜಾಲ ಬೆಳಕಿಗೆ ಬಂದಿದ್ದು, ಈ ಸಂಬಂಧ ಐವರು ಪೊಲೀಸರ ವಶಕ್ಕೆ ಒಳಗಾಗಿದ್ದಾರೆ. ಫೆಬ್ರುವರಿ 20…