ಕೊಡಗು: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕೊಳತೋಡು ಗ್ರಾಮದಲ್ಲಿ ರಕ್ತಸಿಕ್ತ ಘಟನೆ ನಡೆದಿದ್ದು, ಕಾಫಿ ತೋಟದ ಲೈನ್ ಮನೆಯಲ್ಲಿ ನಾಲ್ವರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಈ ದಾರುಣ ಘಟನೆಯು ಸ್ಥಳೀಯರಲ್ಲಿ ಭಯದ ವಾತಾವರಣ ಮೂಡಿಸಿದೆ.

ಹತ್ಯೆಗೀಡಾದವರನ್ನು ಕರಿಯ, ಗೌರಿ, ನಾಗಿ ಹಾಗೂ ಕೇವಲ 7 ವರ್ಷದ ಬಾಲಕಿ ಕಾವೇರಿ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, 35 ವರ್ಷದ ಗಿರೀಶ್ ಎಂಬಾತ ಈ ಹತ್ಯೆ ನಡೆಸಿರುವುದು ಶಂಕಿಸಲಾಗಿದೆ. ಈ ಕೃತ್ಯಕ್ಕೆ ಅಕ್ರಮ ಸಂಬಂಧವೇ ಕಾರಣ ಎಂದು ಹೇಳಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿಯ ಪತ್ತೆಗೆ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಬಗ್ಗೆ ಹೆಚ್ಚಿನ  ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!