ಗೌರಿಬಿದನೂರು ನಗರದ ವಿನಾಯಕ ನಗರದ ವಾಸಿ ಪದ್ಮ ಜೈನ್ (59) ಎಂಬುವವರ 50 ಗ್ರಾಂ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಕಸಿದು ಪರಾರಿಯಾಗಿರುವ ಘಟನೆ ಗೌರಿಬಿದನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಂದು ಬೆಳಗ್ಗೆ ಕೆಲಸದ ವಿಚಾರವಾಗಿ ತುಮಕೂರಿಗೆ ಹೋಗಿದ್ದೆ ಮಧ್ಯಾಹ್ನ 2:00 ಸಮಯದಲ್ಲಿ ಗೌರಿಬಿದನೂರು ಬಸ್ ನಿಲ್ದಾಣದಲ್ಲಿ ಇಳಿದು ಮನೆಗೆ ಬರುತ್ತಿದ್ದ ವೇಳೆ ಮುನ್ಸಿಪಲ್ ಶಾಲೆ ಮುಂಭಾಗದ ರಸ್ತೆಯಲ್ಲಿ ನಾನು ಬಂದಿದ್ದು ನಾನು ಬರುವ ಅಷ್ಟರಲ್ಲಿ ಇಬ್ಬರು ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ನಿಂತಿದ್ದರು.
ನನ್ನ ಪಾಡಿಗೆ ನಾನು ಮನೆಗೆ ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಜೋರಾಗಿ ಬಂದು ಮತ್ತೆ ಒಂದಷ್ಟು ದೂರ ಮುಂದಕ್ಕೆ ಹೋಗಿ ಎದುರುಗಡೆಯಿಂದ ದ್ವಿಚಕ್ರ ವಾಹನದಲ್ಲಿ ಇಬ್ಬರು ವ್ಯಕ್ತಿಗಳು ಮಾಸ್ಕ್ ಮತ್ತು ಹೆಲ್ಮೆಟ್ ಧರಿಸಿ ಬಂದು ನನ್ನ ಕತ್ತಿನಲ್ಲಿದ್ದ 50 ಗ್ರಾಂ ಮಾಂಗಲ್ಯ ಸರವನ್ನು ಕಸಿದುಕೊಂಡು ಹೋಗಿದ್ದಾರೆ ಎಂದು ತಿಳಿಸಿದರು.
ಘಟನೆಗೆ ತಿಳಿದು ಸ್ಥಳಕ್ಕೆ ಸಿಪಿಐ ಕೆ ಪಿ ಸತ್ಯನಾರಾಯಣ್ ಭೇಟಿ ನೀಡಿದ್ದು ಸ್ಥಳೀಯ ಸಿಸಿ ಕ್ಯಾಮೆರಾ ಪರಿಶೀಲಿಸಿದರೆ ಮತ್ತು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಸರ ಕಳೆದುಕೊಂಡ ಪದ್ಮ ಜೈನ್ ರವರು ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ವರದಿ: ಅವಿನಾಶ್