Latest

ಸೋಯಾ ಬಣವಿಗೆ ಬೆಂಕಿ!!

ಬಸವಕಲ್ಯಾಣ : ತಾಲೂಕಿನ ಘಾಟಹಿಪ್ಪರಗಾದಲ್ಲಿ ಸೋಯಾ ಬಣವಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಲಕ್ಷಾಂತರ ರೂ . ಮೌಲ್ಯದ ಸೋಯಾ ಹಾನಿಗೀಡಾಗಿದೆ . ಗ್ರಾಮದ ಸಂಜುಕುಮಾರ ಮಾಲಿ ಪಾಟೀಲ್ ಎನ್ನುವರ ಜಮೀನಿನಲ್ಲಿ ರಾಶಿ ಮಾಡಲು ಕಟಾವು ಮಾಡಿ ಇಟ್ಟಿದ್ದ ಬಣವಿಗೆ ಗುರುವಾರ ಮಧ್ಯ ರಾತ್ರಿ ವೇಳೆಯಲ್ಲಿ ಬೆಂಕಿ ಹೊತ್ತಿಕೊಂಡು ಸುಮಾರು 5 ಲಕ್ಷ ರೂ ಮೌಲ್ಯದ ಸೋಯಾ ಹಾನಿ ಆಗಿದೆ ಎಂದು ಅಂದಾಜಿಸಲಾಗಿದೆ . ಸುಮಾರು 9 ಎಕರೆಯಲ್ಲಿ ಬೆಳೆದ ಸೋಯಾ ರಾಶಿ ಮಾಡುವುದಕ್ಕಾಗಿ ಕಟಾವು ಮಾಡಿ ಇಡಲಾಗಿತ್ತು . ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಭೇಟಿ ನೀಡಿ , ಬೆಂಕಿ ನಂದಿಸಲು ಪ್ರಯತ್ನಿಸಿದರೂ ಅದಾಗಲೇ ಸೋಯಾ ಸುಟ್ಟಿತ್ತು . ಈ ಕುರಿತು ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ . ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು . ಸಲಗರ ಭೇಟಿ : ಘಟನೆ ಹಿನ್ನೆಲೆಯಲ್ಲಿ ಶಾಸಕ ಶರಣು ಸಲಗರ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು . ಹಾನಿಗೆ ಸರ್ಕಾರದಿಂದ ಸಾಧ್ಯವಿರುವ ಪರಿಹಾರ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು . ಘಾಟಹಿಪ್ಪರಗಾದಲ್ಲಿ ಸೋಯಾ ಬಣವಿಗೆಗೆ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ ಮೌಲ್ಯದ ಸೋಯಾ ಹಾನಿಗೀಡಾದ ಹಿನ್ನೆಲೆಯಲ್ಲಿ ಶಾಸಕ ಶರಣು ಸಲಗರ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು . ರೈತ ಸಂಜುಕುಮಾರ ಮಾಲಿಪಾಟೀಲ್ , ಪ್ರಮುಖರಾದ ಸುಧೀರ ಕಾಡಾದಿ , ಶಾಂತವಿಜಯ ಪಾಟೀಲ್‌ , ಮಹಾದೇವ ಪೂಜಾರಿ , ಷಣ್ಮುಖಯ್ಯ ಸ್ವಾಮಿ ಇತರರಿದ್ದರು .

kiran

Recent Posts

ಬೈಕ್ ಟಿಪ್ಪರ್ ನಡುವೆ ಡಿಕ್ಕಿ ಬೈಕ್ ಸವಾರ ಸಾವು

ನಂಜನಗೂಡು: ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸಮೀಪ…

1 month ago

ಅಪರಿಚಿತ ಕಾರು ಡಿಕ್ಕಿ; ಐವರಿಗೆ ಗಂಭೀರ ಗಾಯ, ಓರ್ವ ಮಹಿಳೆ ಸ್ಥಳದಲ್ಲೇ ಸಾವು.

ನಂಜನಗೂಡು: ಅಪರಿಚಿತ ಕಾರು ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ…

1 month ago

ರಸ್ತೆ ಅಪಘಾತ; ಗೊಲಗೇರಿ ಗ್ರಾಮದ ಯುವಕ ಸಾವು.

ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಯಿಂದ ಗೊಲಗೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆ ಅಪಘಾತದಲ್ಲಿ ಗೊಲಗೇರಿ ಗ್ರಾಮದ ಯುವಕ…

1 month ago

ಕುಡಿಯುವ ನೀರಿನ ಬಿಲ್ ಪಾವತಿ ಮಾಡಬೇಡಿ -ಮಾಜಿ ಶಾಸಕ ಹರ್ಷವರ್ಧನ್

ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್‌ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ…

1 month ago

ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಭಟ್ಕಳ ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಅವರು 50,000 ಲಂಚ ಸ್ವೀಕರಿಸುತ್ತಿದ್ದ ವೇಳೆ…

1 month ago

ಮಟ-ಮಟ ಮಧ್ಯಾಹ್ನ‌ ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿ ‌

ಗೌರಿಬಿದನೂರು ನಗರದ ವಿನಾಯಕ ನಗರದ ವಾಸಿ ಪದ್ಮ ಜೈನ್ (59) ಎಂಬುವವರ 50 ಗ್ರಾಂ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ…

1 month ago