ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ಭಗವತಿ ಗ್ರಾಮದಲ್ಲಿ ಬಸ್ ತಡೆದು ವಿದ್ಯಾರ್ಥಿಗಳು ಧರಣಿ ನಡೆಸಿದ ಘಟನೆ ಇಂದು ನಡೆದಿದೆ.
ಬಾಗಲಕೋಟೆಯಿಂದ – ಜಡ್ರಾಮಕುಂಟಿಗೆ ತಲುಪ ಬೇಕಿರುವ ಬಸ್ಸು ಭರ್ತಿಯಾಗಿ ಕಾಲಿಡಲು ಜಾಗವಿಲ್ಲದೆ ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಬಾಗಲಕೋಟೆಯಿಂದ ಭಗವತಿ, ಕಡ್ಲಿಮಟ್ಟಿ, ಅಚನೂರು, ಹೊಲ್ದರು, ಹೀಗೆ ಮುಂತಾದ ಗ್ರಾಮಗಳ ಮೂಲಕ ಜಡ್ರಾಮಕುಂಟಿಗೆ ತಲುಪುವ ವಿದ್ಯಾರ್ಥಿಗಳ ಹಾಗೂ ಪ್ರಯಾಣಿಕರ ಸಮಸ್ಯೆ ಇದಾಗಿದ್ದು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಇವರಿಗೆ ಶಾಶ್ವತ ಪರಿಹಾರ ಒದಗಿಸಿ ಕೊಡಬೇಕಾಗಿದೆ.
ಈ ವಿಷಯವಾಗಿ ವಿದ್ಯಾರ್ಥಿಗಳು ಸಾಕಷ್ಟು ಭಾರೀ ಮನವಿ ನೀಡಿದರು ಸಹ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಸ್ಪಂದಿಸುತ್ತಿಲ್ಲವೆಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಲ್ಲಿ ಬಸ್ ಪಾಸ್ ಮಾಡಿಸಲೆಂದು ಸಾಕಷ್ಟು ಹಣವನ್ನು ಪಡೆದುಕೊಳ್ಳುತ್ತಾರೆ ಆದರೆ ಅದೇ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಿಗೆ ಹೋಗಿ ಬರಲು ಸರಿಯಾದ ಬಸ್ಸಿನ ವ್ಯವಸ್ಥೆ ಇಲ್ಲವೆಂದು ಅಲ್ಲಿನ ವಿದ್ಯಾರ್ಥಿಗಳು ಅಸಹಾಯಕರಾಗಿ ತಿಳಿಸಿದರು.
ಇದೇ ವೇಳೆಯಲ್ಲಿ ಹತ್ತಿರವಿದ್ದ 112 ಪೊಲೀಸ್ ಅಧಿಕಾರಿಗಳು ವಿದ್ಯಾರ್ಥಿಗಳ ಮನವೊಲಿಸುವ ಪ್ರಯತ್ನ ಮಾಡಿದರು ಸಹ ಪಟ್ಟು ಬಿಡದ ವಿದ್ಯಾರ್ಥಿಗಳು ನಮಗೆ ಮತ್ತೊಂದು ಬಸ್ಸು ಬಿಡುವವರೆಗೂ ಧರಣಿಯನ್ನು ಬಿಡುವುದಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.
ಕೊನೆಗೆ ತಿಳಿ ಹೇಳಿ ಎಲ್ಲಾ ವಿದ್ಯಾರ್ಥಿಗಳನ್ನು ಕಳುಹಿಸಲಾಯಿತು.
ಈಗಲಾದರೂ ಬಾಗಲಕೋಟೆ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಇತ್ತ ಕಡೆ ಗಮನಹರಿಸಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು.
ವರದಿ: ವಿಶ್ವನಾಥ ಭಜಂತ್ರಿ