ಮುಂಡಗೋಡ: ತಾಲೂಕಿನ ಕಾತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾತೂರಿನಲ್ಲಿ ಯಶಸ್ವಿಯಾಗಿ ನಡೆಯಿತು.
ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಇಂತಹ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತದೆ.ಈ ಕಾರ್ಯಕ್ರಮವನ್ನು ಎಸ್.ಡಿ. ಎಮ್. ಸಿ ಸಮಿತಿಯ ಅಧ್ಯಕ್ಷರಾದ ಪುಟ್ಟಪ್ಪ ಎಲಿವಾಳ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಜಿ.ಎನ್.ನಾಯ್ಕ,ಎಸ್.ಡಿ.ಎಮ್.ಸಿ.ಸದಸ್ಯರಾದ ಪ್ರಕಾಶ ಅಜ್ಜಮ್ಮನವರ,ಬಿ.ಆರ್.ಪಿ,ಸಿ.ಆರ್.ಪಿ, ಶಿಕ್ಷಣ ಸಂಯೋಜಕರು, ಸಂಘದ ಪದಾಧಿಕಾರಿಗಳು ಹಾಗೂ ವಿವಿಧ ಶಾಲೆಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ :ಮಂಜುನಾಥ ಹರಿಜನ