ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರು ಇತ್ತೀಚೆಗೆ ‘ಖಾನೆ ಮೇ ಕ್ಯಾ ಹೈ’ ಯೂಟ್ಯೂಬ್ ಚಾನೆಲ್‌ನ ‘ಖಾನೆ ಮೇ ಕೌನ್ ಹೇ’ ಎಂಬ ಸಂಚಿಕೆಯಲ್ಲಿ ಕಾಣಿಸಿಕೊಂಡಿದ್ದರು. ಆ ವೇಳೆ ತಮ್ಮ ಆಹಾರ ಕ್ರಮದ ರೀತಿ, ನೀತಿಗಳ ಬಗ್ಗೆ ಮಾತನಾಡಿದ್ದರು. ಇನ್ನು ಅದೇ ವೇಳೆ ಸುಧಾ ಮೂರ್ತಿ ಅವರು ನೀಡಿದ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಚಾರವಾಗಿ ನಟ ಚೇತನ್ ಅಹಿಂಸಾ ಅವರು ನೇರವಾಗಿ ಸುಧಾಮೂರ್ತಿ ಅವರನ್ನು ಟ್ವೀಟ್ ಮೂಲಕ ಟೀಕಿಸಿದ್ದಾರೆ.
“ನಾನು ಶುದ್ಧ ಸಸ್ಯಾಹಾರಿ, ಮೊಟ್ಟೆ, ಈರುಳ್ಳಿ, ಬೆಳ್ಳುಳ್ಳಿ ಕೂಡ ಸೇವಿಸುವುದಿಲ್ಲ. ವಿದೇಶಕ್ಕೆ ಹೋಗುವಾಗ ತಮಗೆ ಬೇಕಾದ ಊಟ ತಿಂಡಿಯನ್ನು ರೆಡಿ ಮಾಡಿಕೊಂಡು ಬ್ಯಾಗ್ ನಲ್ಲಿ ಹಾಕಿಕೊಂಡು ಹೋಗುತ್ತೇನೆ. ಈ ಹೋಟೆಲ್‌ಗಳಲ್ಲಿ ಸಸ್ಯಾಹಾರ-ಮಾಂಸಾಹಾರ ಭಕ್ಷ್ಯಗಳಿಗೆ ಒಂದೇ ಚಮಚ ಬಳಸುವ ಬಗ್ಗೆ ನನ್ನ ಮನಸ್ಸಿಗೆ ತುಂಬಾ ಆತಂಕವಾಗುತ್ತದೆ. ಹೀಗಾಗಿ ವಿದೇಶಕ್ಕೆ ಹೋಗುವಾಗ ಸ್ಪೂನ್ ಕೂಡ ಜೊತೆಗೆ ತೆಗೆದುಕೊಂಡು ಹೋಗುತ್ತೇನೆ” ಎಂದು ಸುಧಾ ಮೂರ್ತಿ ಅವರು ಹೇಳಿರುವ ಮಾತು ಟ್ರೋಲ್ ಆಗುತ್ತಿದೆ.
ಇನ್ನು ಈ ಕುರಿತು ಟ್ವೀಟ್ ಮಾಡಿರುವ ನಟ ಚೇತನ್ “ಸುಧಾಮೂರ್ತಿಯವರು ನಮ್ಮ ಬ್ರಾಹ್ಮಣ್ಯ-ಬಂಡವಾಳಶಾಹಿ ಸಮಾಜದಿಂದ ಅತಿಯಾದ ಬಿಲ್ಡಪ್‌ನಿಂದ ಗುರುತಿಸಲ್ಪಟ್ಟ ಮತ್ತು ಅನರ್ಹವಾಗಿ ಗೌರವಿಸಲ್ಪಟ್ಟ ಸಾರ್ವಜನಿಕ ವ್ಯಕ್ತಿ” ಮುಂದುವರಿದು, “ಅವರು ತನ್ನ ಸೀಮಿತ, ಮಡಿವಂತಿಕೆಯ ಚಿಂತನೆಯನ್ನು ಬಹಿರಂಗಪಡಿಸುವ ಹೇಳಿಕೆಗಳನ್ನು ನಿರಂತರವಾಗಿ ಮಾಡುತ್ತಾರೆ. ಸುಧಾಮೂರ್ತಿಯವರು ಹೆಚ್ಚು ಮಾತನಾಡಬೇಕು; ಅವರ ಆಸ್ತಿ ಜಗದಗಲ -ತಿಳಿವಳಿಕೆ ಚಮಚದಗಲ!” ಎಂದು ಟೀಕಿಸಿದ್ದಾರೆ.
Sudha Murthy— a personality who is over-hyped & undeserving revered by our Brahminical capitalist society— consistently makes statements that reveal her limited, puritanical thinking
She should do more talking —>
A universe of wealth with just a spoonful of thought pic.twitter.com/juQoWw0stZ
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) July 27, 2023