ಕಳೆದ ಮೇ 15ರಂದು ಹುಬ್ಬಳ್ಳಿಯ ವೀರಪುರ ಓಣಿಯಲ್ಲಿ ಅಂಜಲಿ ಎಂಬ ಯುವತಿಯನ್ನು ಪ್ರೀತಿಯ ವಿಚಾರಕ್ಕೆ ಮನೆಗೆ ಬಂದು ಗಿರೀಶ ಎಂಬ ಯುವಕ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆಯ ಹಂತದಲ್ಲಿರುವಾಗಲೇ ಕರ್ತವಲೋಪದ ಆಧಾರದ ಮೇಲೆ ನಾಲ್ಕು ಜನ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ರಾಜ್ಯ ಸರ್ಕಾರದಿಂದ ಹುಬ್ಬಳ್ಳಿ ಧಾರವಾಡ ಡಿಸಿಪಿ ರಾಜೀವ್ ಹಾಗೂ ಹುಬ್ಬಳ್ಳಿ ದಕ್ಷಿಣ ವಿಭಾಗದ ಎಸಿಪಿ ವಿಜಯಕುಮಾರ್ ತಳವಾರ್ ಅವರನ್ನು ಸಸ್ಪೆಂಡ್ ಮಾಡಿದ್ದರೇ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಶ್ರೀ ರೇಣುಕಾ ಸುಕುಮಾರ್ ಅವರು ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಚಂದ್ರಕಾಂತ್ ಹಾಗೂ ಮಹಿಳಾ ಮುಖ್ಯಪೇದೆ ರೇಖಾ ಹಾವರೆಡ್ಡಿ ಅವರನ್ನು ಅಮಾನತು ಮಾಡಿದ್ದಾರೆ.