ಮುಂಡಗೋಡ: ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮೂವರ ಮೇಲೆ ತಹಶೀಲ್ದಾರ್ ಶಂಕರ್ ಗೌಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ..
ಡಿಸೆಂಬರ್ 30 ರ ಶುಕ್ರವಾರದಂದು ತಹಶೀಲ್ದಾರ್ ಶಂಕರ್ ಗೌಡಿ ಹಾಗೂ ತಮ್ಮ ಸಿಬ್ಬಂದಿಗಳಾದ ಕಂದಾಯ ನಿರೀಕ್ಷಕ ವಿಕ್ರಮಸಿಂಗ್ ರಜಪೂತ, ಗ್ರಾಮ ಲೆಕ್ಕಾಧಿಕಾರಿ ಗಿರೀಶ್ ರಣದೇವ ಅವರೊಂದಿಗೆ ತಾಲೂಕಿನ ಸನವಳ್ಳಿ ಗ್ರಾಮದಲ್ಲಿ ಅನಧಿಕೃತ ಸಾಗುವಳಿ ಹಾಗೂ ಅಕ್ರಮ ಇಟ್ಟಿಗೆ ಭಟ್ಟಿಗಳ ನಿರ್ಮಾಣ ಮಾಡಿರುವ ಬಗ್ಗೆ ಪರಿಶೀಲನೆ ಮಾಡಲು ಹೋದಾಗ ಸನವಳ್ಳಿಯ ರವಿ ಕೋಣನಕೇರಿ, ಕುಬೇರಪ್ಪ ಕೋಣನಕೇರಿ, ಹಾಗೂ ಗುಡ್ಡಪ್ಪ ಕೋಣನಕೇರಿಯವರು ನಮಗೆ ಸ್ಥಳ ಪರಿಶೀಲನೆ ಮಾಡದಂತೆ,ಅವಾಚ್ಯ ಶಬ್ದಗಳಿಂದ ನಿಂದಿಸಿ,ಹಲ್ಲೆಗೆ ಯತ್ನಿಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ..
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವರದಿ: ಮಂಜುನಾಥ ಹರಿಜನ