ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ಸ್ಫೋಟ ಪ್ರಕರಣದ ಹಿಂದೆ ಉಗ್ರರ ಕೈವಾಡವಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಇದರ ಬೆನ್ನಲ್ಲೇ ರಾಜ್ಯಾದ್ಯಂತ ಕಟ್ಟೆಚ್ಚರಕ್ಕೆ ಸೂಚನೆ ನೀಡಲಾಗಿದೆ
ರಾಜ್ಯದಲ್ಲಿ ಸೂಕ್ಷ, ಅತಿಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ನಿಗಾವಹಿಸಲು ಗೃಹ ಇಲಾಖೆ ಪೊಲೀಸರಿಗೆ ಸೂಚನೆ ನೀಡಿದೆ. ಏರ್ ಪೋರ್ಟ್, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಜನನಿಬಿಡ ಪ್ರದೇಶಗಳು, ಪ್ರವಾಸಿ ತಾಣಗಳು, ದೇವಾಲಯಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ಸೂಚಿಸಲಾಗಿದೆ.
ಮಂಗಳೂರಿನಲ್ಲಿ ಆಟೋದಲ್ಲಿ ಸ್ಫೋಟ ಪ್ರಕರಣದ ಹಿಂದೆ ಉಗ್ರರ ಕೈವಾಡವಿರುವ ಬಗ್ಗೆ ಖಚಿತವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ತೀವ್ರ ನಿಗಾವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.