ಕಲಬುರಗಿ – ಪ್ರಸಕ್ತ 2022 ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆಯು (ಟಿ.ಇ.ಟಿ) ನವೆಂಬರ್ 6 ರಂದು ರವಿವಾರ ಕಲಬುರಗಿ ನಗರದ 62 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಎಲ್ಲಾ ಪರೀಕ್ಷಾ ಕೇಂದ್ರಗಳ 200 ಮೀಟರ್ ಪ್ರದೇಶದ ಸುತ್ತಮತ್ತಲೂ (ಕಲಂ 144ರನ್ವಯ) ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಎಂದು ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಸಕ್ರೆಪ್ಪಗೌಡ ಬಿರಾದಾರ ಅವರು ತಿಳಿಸಿದ್ದಾರೆ.
ಪರೀಕ್ಷೆಗೆ ಆಗಮಿಸುವ ಅಭ್ಯರ್ಥಿಗಳು ಶೂ ಮತ್ತು ಬೆಲ್ಟ ಧರಿಸಿ ಬರುವುದನ್ನು ನಿಷೇಧಿಸಲಾಗಿದ್ದು, ಪ್ರವೇಶ ಪತ್ರದಲ್ಲಿ ತಮ್ಮ ಸಹಿ ಮತ್ತು ಭಾವಚಿತ್ರ ಪ್ರಕಟವಾಗದಿರುವ ಅಥವಾ ಸಹಿ ಮತ್ತು ಭಾವಚಿತ್ರ ವ್ಯತ್ಯಾಸ ಕಂಡುಬಂದ ಅಭ್ಯರ್ಥಿಗಳು ತಮ್ಮೊಂದಿಗೆ ಆನ್‍ಲೈನ್ ಅರ್ಜಿ, ತಮ್ಮ ಇತ್ತೀಚಿನ ಭಾವಚಿತ್ರ ಮತ್ತು ಆಧಾರ ಕಾರ್ಡ್ ಅಥವಾ ಮತ್ತಿತರ ಅಧಿಕೃತ ಗುರುತಿನ ಚೀಟಿಯನ್ನು ಪರೀಕ್ಷಾ ಕೇಂದ್ರದ ಅಧಿಕಾರಿಗಳಿಗೆ ಕಡ್ಡಾಯವಾಗಿ ತೋರಿಸಬೇಕು. ಎಲೆಕ್ಟ್ರಾನಿಕ್ಸ ಯಾವುದೇ ಯಂತ್ರಗಳನ್ನು ಪರೀಕ್ಷಾ ಕೇಂದ್ರದಲ್ಲಿ ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಅಭ್ಯರ್ಥಿಗಳು ಪರೀಕ್ಷೆಗೆ ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು.
ಅಧಿವೇಶನ-1 ಪತ್ರಿಕೆ ಅಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಒಟ್ಟು 46 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಅಧಿವೇಶನ-2 ಪತ್ರಿಕೆ ಅಂದು ಮಧ್ಯಾಹ್ನ 2 ರಿಂದ ಸಾಯಂಕಾಲ 4.30 ಗಂಟೆಯವರೆಗೆ 62 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 16,984 ಜನ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 62 ಪರೀಕ್ಷಾ ಕೇಂದ್ರಗಳಿಗೆ 18 ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಈ ಕೆಳಕಂಡ ಪರೀಕ್ಷಾ ಕೇಂದ್ರಗಳ ವಿಳಾಸ ಕುರಿತು ಡಿ.ಡಿ.ಪಿ.ಐ. ಇವರಿಂದ ಸ್ಪಷ್ಟೀಕರಣ: ಪರೀಕ್ಷಾ ಕೇಂದ್ರ ಸಂಖ್ಯೆ 34ರ ಸರಿಯಾದ ವಿಳಾಸ ಸರ್ವಜ್ಞ ಪ್ರೌಢಶಾಲೆ ಸಾಯಿ ಮಂದಿರ ರೋಡ ಕಲಬುರಗಿ, ಪರೀಕ್ಷಾ ಕೇಂದ್ರ ಸಂಖ್ಯೆ 47ರ ಸಂಗಮ ಪ್ರೌಢಶಾಲೆಯ ಸರಿಯಾದ ವಿಳಾಸ ಸಂಗಮ ಪ್ರೌಢಶಾಲೆ ಮಹಾಲಕ್ಷ್ಮೀ ಲೇಔಟ್ ಹುಮನಾಬಾದ ರಿಂಗ್ ರೋಡ ಕಲಬುರಗಿ, ಪರೀಕ್ಷಾ ಕೇಂದ್ರ ಸಂಖ್ಯೆ 49ರ ಸರಿಯಾದ ವಿಳಾಸ ನ್ಯಾಷನಲ್ ಉರ್ದು ಬಾಲಕರ ಪ್ರೌಢ ಶಾಲೆ ಹಫ್ತ ಗುಂಬಜ ಕಲಬುರಗಿ, ಪರೀಕ್ಷಾ ಕೇಂದ್ರ ಸಂಖ್ಯೆ 50ರ ಸರಿಯಾದ ವಿಳಾಸ ನ್ಯಾಷನಲ್ ಪದವಿ ಪೂರ್ವ ಕಾಲೇಜು ಹಫ್ತ ಗುಂಬಜ ಕಲಬುರಗಿ ಹಾಗೂ ಪರೀಕ್ಷಾ ಕೇಂದ್ರ ಸಂಖ್ಯೆ 62ರ ಸರಿಯಾದ ವಿಳಾಸ ನ್ಯೂಟನ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಪಟೇಲ್ ಕಾಲೋನಿ ಎಂ.ಎಸ್.ಕೆ.ಮಿಲ್. ರಸ್ತೆ ಜಾಫರಾಬಾದ ಕಲಬುರಗಿ.
ವರದಿ ನಾಗರಾಜ್ ಗೊಬ್ಬುರ್
ನಂಜನಗೂಡು: ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸಮೀಪ…
ನಂಜನಗೂಡು: ಅಪರಿಚಿತ ಕಾರು ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ…
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಯಿಂದ ಗೊಲಗೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆ ಅಪಘಾತದಲ್ಲಿ ಗೊಲಗೇರಿ ಗ್ರಾಮದ ಯುವಕ…
ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್‌ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಭಟ್ಕಳ ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಅವರು 50,000 ಲಂಚ ಸ್ವೀಕರಿಸುತ್ತಿದ್ದ ವೇಳೆ…
ಗೌರಿಬಿದನೂರು ನಗರದ ವಿನಾಯಕ ನಗರದ ವಾಸಿ ಪದ್ಮ ಜೈನ್ (59) ಎಂಬುವವರ 50 ಗ್ರಾಂ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ…