ರಾಯಚೂರಿನ ಪಶ್ಚಿಮ ಠಾಣೆ ಪೊಲೀಸರು ರಾಜ್ಯದಲ್ಲೇ ಅತಿದೊಡ್ಡ ಖೋಟಾ ನೋಟು ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ದಂಧೆಯಲ್ಲಿ ತೊಡಗಿದ್ದ ಪೊಲೀಸರು ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ಲಕ್ಷಾಂತರ ಮೌಲ್ಯದ ಖೋಟಾ ನೋಟುಗಳು ಮತ್ತು ಅವು ಮುದ್ರಿಸಲು ಬಳಸುತ್ತಿದ್ದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಖಚಿತ ಮಾಹಿತಿಯ ಮೇರೆಗೆ, ನಗರದಲ್ಲಿ ಪೊಲೀಸರು ದಾಳಿ ನಡೆಸಿ ಈ ಅಕ್ರಮ ಚಟುವಟಿಕೆಗೆ ಸಂಬಂಧಿಸಿದ ಅಡ್ಡೆಯನ್ನು ಪತ್ತೆ ಹಚ್ಚಿದ್ದಾರೆ. ದಾಳಿಯ ವೇಳೆ, ವೈಟ್ ಪೇಪರ್ ಸೇರಿದಂತೆ ನಕಲಿ ನೋಟು ತಯಾರಿಕೆಗೆ ಬಳಸಲಾಗುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಪ್ರಕರಣದಲ್ಲಿ ರಾಯಚೂರು ಸಶಸ್ತ್ರ ಮೀಸಲು ಪಡೆಯ ಕಾನ್ಸ್‌ಸ್ಟೇಬಲ್ ಮರಿಲಿಂಗ, ರಮೇಶ್ ಆದಿ, ಶಿವಲಿಂಗ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಈ ದಾಳಿ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ.

Leave a Reply

Your email address will not be published. Required fields are marked *

error: Content is protected !!