ಮುಂಡಗೋಡ ತಾಲೂಕಿನ ಮಳಗಿಯ ಧರ್ಮಾ ಜಲಾಶಯದಲ್ಲಿ ಈಜಾಡಲು ಹೋಗಿದ್ದ ಸಂದರ್ಭದಲ್ಲಿ ಓರ್ವ ಮುಳುಗಿ ಸಾವನಪ್ಪಿದ ಘಟನೆ ನಡೆದಿದೆ.
ಮೂಡಸಾಲಿ ಗ್ರಾಮದ ಶ್ರೀನಾಥ ಹರಿಜನ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.ಬುಧವಾರ ಸ್ನೇಹಿತರೊಂದಿಗೆ ಈಜಾಡಲು ತೆರಳಿದ್ದಾಗ ಕಣ್ಮರೆಯಾಗಿದ್ದನು.ಈ ಘಟನೆ ಬಗ್ಗೆ ಮಾಹಿತಿ ತಿಳಿದ ಪೊಲೀಸರು ತೀವ್ರ ಶೋಧ ನಡೆಸಿದ್ದು, ಗುರುವಾರ ಮಾರಿಕಾಂಬಾ ಲೈಫ್ ಗಾರ್ಡ್ ಅವರ ಸಹಕಾರದೊಂದಿಗೆ ಪೊಲೀಸರು ಕಾರ್ಯಾಚರಣೆ ಮಾಡಿ ಮುಳುಗಿದ ವ್ಯಕ್ತಿಯ ಶವವನ್ನು ಹೊರ ತೆಗೆದಿದ್ದಾರೆ.