ಬಾಳೆಹೊನ್ನೂರು: ಲಾರಿಯನ್ನು ಅಡ್ಡಗಟ್ಟಿ ಹಣಕ್ಕಾಗಿ ಬೇಡಿಕೆ ಇಟ್ಟು, ಚಾಲಕನಿಗೆ ಹಲ್ಲೆ ಮಾಡಿದ ಆರೋಪದ ಮೇಲೆ ಶೃಂಗೇರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸುದೀಪ್ ಹಾಗೂ ಮೆಣಸೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮಂಜು ಅವರನ್ನು ಬಾಳೆಹೊನ್ನೂರು ಪೊಲೀಸರು ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.
ಈ ಘಟನೆ ಬಾಳೆಹೊನ್ನೂರು ಸಮೀಪ ಹರಿಗೆ ಎಂಬಲ್ಲಿ ನಡೆದಿದೆ. ಕಾಫಿ ಸಾಗಣಿಕೆ ಮಾಡುತ್ತಿದ್ದ ಲಾರಿಯನ್ನು ಸರ್ಕಾರಿ ವಾಹನದಲ್ಲಿ ಬಂದ ಇಬ್ಬರು ಆರೋಪಿಗಳು ತಡೆದು ನಿಲ್ಲಿಸಿದ್ದಾರೆ. ಬಳಿಕ, ಲಾರಿಯಲ್ಲಿದ್ದ ಕಾಫಿ ಸರಕು ಸಂಬಂಧಿತ ಬಿಲ್ ನೀಡಲು ಚಾಲಕ ಆತೀಫ್ ಮುಂದಾದಾಗ, ಅವರು ₹50,000 ಲಂಚ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಹಣ ನೀಡಲು ನಿರಾಕರಿಸಿದ ಆತೀಫ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಲಾಗಿದೆ.
ಘಟನೆ ಸಂಬಂಧ, ಆತೀಫ್ ಅವರ ಸ್ನೇಹಿತ ಹಾಗೂ ಹೇರೂರು ಗ್ರಾಮ ಪಂಚಾಯಿತಿ ಸದಸ್ಯ ಅಮ್ಜದ್ ಪೊಲೀಸ್ ದೂರು ನೀಡಿದ್ದಾರೆ. ‘ಇದು ಅಕ್ರಮವೆಂದು ಹೇಳಿದ ನನಗೂ ನಿಂದಿಸಿ, ಹಲ್ಲೆ ನಡೆಸಲಾಯಿತು. ಅಲ್ಲದೆ ಜೀವ ಬೆದರಿಕೆ ಹಾಕಲಾಯಿತು. ಸರ್ಕಾರಿ ವಾಹನ ದುರುಪಯೋಗ ಮಾಡಲಾಗಿದೆ’ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು, ಸುದೀಪ್ ಮತ್ತು ಮಂಜು ಅವರನ್ನು ಬಂಧಿಸಿ ತಕ್ಷಣವೇ ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.
ಈ ಘಟನೆಯು ಸ್ಥಳೀಯ ಮಟ್ಟದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಜನತೆ ಆಗ್ರಹಿಸುತ್ತಿದ್ದಾರೆ.
ಹಾವೇರಿ: ಎಟಿಎಂ ಕಾರ್ಡ್ ವಂಚನೆ ನಡೆಸಿದ ಪ್ರಕರಣದಲ್ಲಿ ಹಿರೇಮೊರಬ ಗ್ರಾಮದ ಗಿರೀಶ್ ಎಂಬ ವ್ಯಕ್ತಿಯನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಘಟನೆ…
ಬೆಂಗಳೂರು, ಫೆಬ್ರವರಿ 21: ವಿದೇಶಿ ಉದ್ಯೋಗ ನೀಡುವ ಆಮಿಷವೊಡ್ಡಿ ಬರೋಬ್ಬರಿ 53 ಮಂದಿಗೆ ಕೋಟಿ, ಕೋಟಿ ರೂ ವಂಚಿಸಿ, ದಂಪತಿ…
ದಾವಣಗೆರೆ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿರಂತರವಾಗಿ ಬೆಳೆಯುತ್ತಿದ್ದು, ಹೊಸ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ರಾಜ್ಯ…
ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಖಜೂರಿ ಗ್ರಾಮದ ಯುವಕ ರಾಹುಲ್, ಕಳೆದ ಜನವರಿ 30ರಿಂದ ಕಾಣೆಯಾಗಿದ್ದು, ಆತನ ಶವ ಮಹಾರಾಷ್ಟ್ರದ…
ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಕೃಷಿ ಇಲಾಖೆಯ…
ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಭಾಷೆಯ ವಿವಾದ ಸ್ಫೋಟಗೊಂಡಿದ್ದು, ಮರಾಠಿ ಭಾಷೆಯಲ್ಲಿ ಟಿಕೆಟ್ ಕೇಳಿದ್ದಕ್ಕೆ ಕನ್ನಡದಲ್ಲಿ ಮಾತನಾಡಲು ಸೂಚಿಸಿದ ಬಸ್ ಕಂಡಕ್ಟರ್…