ದೇಶ ಇಂದು ಪಂಡಿತ್ ಜವಾಹರ್ ಲಾಲ್ ನೆಹರು ಅವರ ಕೈಯಲ್ಲಿಲ್ಲ, ಅಂಬೇಡ್ಕರ್, ಭಗತ್ ಸಿಂಗ್ ಅವರ ಕೈಯಲ್ಲಿಲ್ಲ. ತನ್ನ ಪತ್ನಿಯ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಸಾಧ್ಯವಿಲ್ಲದವರ ಕೈಯಲ್ಲಿ ದೇಶ ಇದೆ ಎಂದು ಅಖಿಲ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಎಐಸಿಸಿ ಉಸ್ತುವಾರಿ ಕನ್ನಯ್ಯ ಕುಮಾರ್ ಪ್ರಧಾನಿ ಮೋದಿ ವಿರುದ್ಧ ಪರೋಕ್ಷವಾಗಿ ವ್ಯಂಗ್ಯವಾಡಿದ್ದಾರೆ. ಅರಮನೆ ಮೈದಾನದಲ್ಲಿ ನಡೆದಿರುವ ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಾವೇಶದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದ ಅವರು, ಸತ್ಯ ಹೇಳುವವರು ಎಂದಿಗೂ ಹೆದರಬಾರದು. ಸುಳ್ಳು ಹೇಳುವವರಿಗೆ ಹೆದರಿಕೆ ಸಹಜ. ಈ ದೇಶ ಪ್ರತಿಯೊಬ್ಬರಿಗೂ ಸೇರಿದ್ದು, ಎಲ್ಲರಿಗಾಗಿ ನಾವು ಹೋರಾಟ ಮಾಡೋಣ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದ ಎಲ್ಲಾ ಅಂಗ ಸಂಸ್ಥೆಗಳು ದೇಶದ ಭದ್ರ ಬುನಾದಿಯನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದ ಅವರು ಯುವ ಕಾಂಗ್ರೆಸ್ ಆರ್.ಎಸ್.ಎಸ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸುವ ಸ್ಥಿತಿಲ್ಲಿಯಲ್ಲಿದ್ದು, ಯುವ ಸಮೂಹದ ಸಮಸ್ಯೆಗಳ ವಿರುದ್ಧ ಹೋರಾಟ ಮಾಡಬೇಕು ಎಂದರು. ಯುವ ಕಾಂಗ್ರೆಸ್ ಸತ್ಯಕ್ಕಾಗಿ ಸಂಘರ್ಷ ನಡೆಸುತ್ತಿದ್ದು, ನಮ್ಮ ಹಿರಿಯ ನಾಯಕರ ಆಶಯಗಳನ್ನು ಎಂದಿಗೂ ಮರೆಯಬಾರದು. ಯುವ ಜನರಿಗಾಗಿ ಏನು ಮಾಡಬೇಕು ಎಂಬುದನ್ನು ಅರಿಯಬೇಕು ಎಂದು ಕರೆ ನೀಡಿದರು.
1 thought on “ತನ್ನ ಪತ್ನಿಯ ಜವಾಬ್ದಾರಿ ವಹಿಸಿಕೊಳ್ಳಲು ಸಾಧ್ಯವಿಲ್ಲದವರ ಕೈಯಲ್ಲಿ ದೇಶವಿದೆ – ಕನ್ನಯ್ಯ ವ್ಯಂಗ್ಯ”
Comments are closed.
A kanaya Yogi ji gu hendati ella
Abdul Kalam avrigu erlila
Nin ಯೋಗ್ಯತೆ ಏನು ಅಂತ ಯಾರಿಗೂ ಗೊತಿದೆ…. ಬಾಯಿ ಮುಚ್ಚಿಕೊಂಡು eru ಸಾಕು.