ಹೊಸಕೋಟೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮಂಜುನಾಥ್ ಮತ್ತು ಮಧ್ಯವರ್ತಿ ಸುರೇಶ್ ಎಂಬಾತ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜೈರಾಮ್ ಎಂಬುವವರ ವಿರುದ್ಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ ಆತನ ವಿರುದ್ಧ ರೌಡಿಶೀಟರ್ ತೆಗೆಯದಿರಲು 15,000 ರೂ ಹಣಕ್ಕೆ ಮಂಜುನಾಥ್ ಬೇಡಿಕೆ ಇಟ್ಟಿರುತ್ತಾರೆ. ಜಯರಾಮ್ ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಠಾಣೆಯಲ್ಲಿ ದೂರನ್ನು ನೀಡಿದ್ದು ಹೆಡ್ ಕಾನ್ಸ್ಟೇಬಲ್ ಮಂಜುನಾಥ್ ಮತ್ತು ಮಧ್ಯವರ್ತಿ ಸುರೇಶ್ ಹಣ ಪಡೆಯುವಂತಹ ಸಂದರ್ಭದಲ್ಲಿ ಲೋಕಾಯುಕ್ತರು ದಾಳಿ ಮಾಡಿದ್ದು ಇವರಿಬ್ಬರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.