ಬೆಂಗಳೂರು ನಗರದ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಮೂಕಪ್ರಾಣಿಗಳ ಮೇಲೆ ಕಿಡಿಗೇಡಿಗಳು ಕ್ರೂರವಾಗಿದಿರುವ ಘಟನೆ ನಡೆದಿದೆ. ಶನಿವಾರ ತಡರಾತ್ರಿ, ರಸ್ತೆ ಮೇಲೆ ಮಲಗಿದ್ದ ಮೂರು ಹಸುಗಳ ಮೇಲೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಚಾಕುವಿನಿಂದ ಹಸುಗಳ ಕೆಚ್ಚಲನ್ನು ಕೊಯ್ದು ಪರಾರಿಯಾಗಿದ್ದಾರೆ. ಹಸುಗಳು ರಕ್ತಸ್ರಾವದಿಂದ ನರಳಾಡುತ್ತಿದ್ದವು.
ಸ್ಥಳೀಯರು ಈ ದೃಶ್ಯವನ್ನು ಕಂಡು ತಕ್ಷಣ ಹಸುಗಳನ್ನು ಪಶು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲು ಕೈಗೊಂಡಿದ್ದಾರೆ. ಈ ಘಟನೆ ನಂತರ, ಸ್ಥಳೀಯರು ಕಿಡಿಗೇಡಿಗಳನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಈ ಪ್ರಕರಣ ಸಂಬಂಧಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಮತ್ತು ತನಿಖೆ ಮುಂದುವರೆದಿದೆ.