More

ಹಾರಿದ ಬೆನ್ನಲ್ಲೇ ನೆಲಕ್ಕೆ ಅಪ್ಪಳಿಸಿದ ವಿಮಾನ; ಪೈಲಟ್ ಒಬ್ಬ ಬಚಾವ್, 18 ಮಂದಿ ಮೃತ!

ಶೌರ್ಯ ಏರ್​ಲೈನ್ಸ್​ನ 9ಎನ್​-ಎಎಂಇ (ಸಿಆರ್​ಜೆ 200) ವಿಮಾನ ಟೇಕಾಫ್​ ಆಗುವ ವೇಳೆ ಪತನಗೊಂಡು 18 ಮಂದಿ ದುರಂತ ಸಾವಿಗೀಡಾಗಿರುವ ಘಟನೆ ನೇಪಾಳ ರಾಜಧಾನಿ ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಜುಲೈ 24ರ ಬೆಳಗ್ಗೆ ನಡೆದಿದೆ.

ವಿಮಾನದಲ್ಲಿ ಪೈಲಟ್​ ಸೇರಿ 19 ಮಂದಿ ಇದ್ದರು. 18 ಮಂದಿಯ ಮೃತದೇಹವನ್ನು ವಶಕ್ಕೆ ಪಡೆಯಲಾಗಿದೆ. ವಿಮಾನದ ಅವಶೇಷಗಳಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡಿರುವ 37 ವರ್ಷದ ಪೈಲಟ್ ಮನಿಶ್​ ಶಕ್ಯ ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಶೌರ್ಯ ಏರ್​ಲೈನ್ಸ್​ ವಿಮಾನವು ವಿಮಾನಯಾನ ಸಂಸ್ಥೆಯ ತಾಂತ್ರಿಕ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು. ವಿಮಾನವು ಕಠ್ಮಂಡುವಿನಿಂದ ಪೋಖರಾಗೆ ತೆರಳುತ್ತಿತ್ತು. ಟೇಕಾಫ್​ ಆಗುವಾಗ ರನ್​ವೇನಿಂದ ಜಾರಿದ್ದು, ಬೆಳಗ್ಗೆ 11 ಗಂಟೆ ಸುಮಾರಿಗೆ ವಿಮಾನದಲ್ಲಿ ಬೆಂಕಿ ಹೊತ್ತಿಕೊಂಡಿತು. ಈ ಅಪಘಾತದ ನಂತರ ವಿಮಾನದಿಂದ ದಟ್ಟ ಹೊಗೆ ಕಾಣಿಸಿಕೊಂಡಿದೆ. ರಕ್ಷಣಾ ಕಾರ್ಯಾಚರಣೆಗಾಗಿ ಪೊಲೀಸ್ ಸಿಬ್ಬಂದಿ ಮತ್ತು ಅಗ್ನಿಶಾಮಕ ಸಿಬ್ಬಂದಿಯನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago