ಅಳಂದ: ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಮಾದನ ಹಿಪ್ಪರಗಾ ಗ್ರಾಮದ ಕರ್ನಾಟಕ ಪಬ್ಲಿಕ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು ಪಾಠ ಮಾಡುತ್ತಿರುವ ಸಂದರ್ಭದಲ್ಲೇ ಮೇಲ್ಛಾವಣಿ ಕುಸಿದು ವಿದ್ಯಾರ್ಥಿನಿಯರ ಮೇಲೆ ಬಿದ್ದಿದೆ. ಮೂವರು ವಿದ್ಯಾರ್ಥಿನಿಯರಿಗೆ ಗಾಯವಾಗಿದ್ದು ನಿಕಿತಾ ಎಂಬ ವಿದ್ಯಾರ್ಥಿಗೆ ತಲೆಗೆ ಗಂಭೀರ ಗಾಯವಾಗಿದೆ. ಗಾಯಾಳು ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.