ಯರಮರಸ್ ಕ್ಯಾಂಪ್ ನಿವಾಸಿ ಶಿಕ್ಷಕಿ ಸುಹಾಸಿನಿ (29) ಅ.20 ರಂದು ಹೊರಗೆ ಹೋಗಿ ಬರುವುದಾಗಿ ಮನೆಯಿಂದ ಹೋದವಳು ನಾಪತ್ತೆಯಾಗಿದ್ದಾಳೆ. ರಾಯಚೂರಿನಲ್ಲಿ ವಿವಾಹಿತ ಶಿಕ್ಷಕಿಯೊಬ್ಬರು ೭ ವರ್ಷದ ಮಗುವನ್ನೂ ತೊರೆದು ನಾಪತ್ತೆಯಾಗಿದ್ದು, ಇದರ ಹಿಂದೆ ಲವ್ ಜಿಹಾದ್ ನಡೆದಿದೆ ಎಂದು ಶಿಕ್ಷಕಿಯ ತಾಯಿ ಹಾಗೂ ಕುಟುಂಬಸ್ಥರು ಆರೋಪಿಸಿದ್ದಾರೆ.
ಸಲೀಂ ಎಂಬ ಮುಸ್ಲಿಂ ಯುವಕನ ಜೊತೆ ಈಕೆ ಹೋಗಿರುವುದಾಗಿ ಆರೋಪಿಸಲಾಗಿದೆ. ಸುಹಾಸಿನಿ ತಾಯಿ ನಿರ್ಮಲಾ ಅವರು ಈ ಕುರಿತು ಗಂಭೀರ ಆರೋಪ ಮಾಡಿದ್ದಾರೆ. ತಾನು ಸುಹಾಸಿನಿಯ ಕ್ಲಾಸ್‌ಮೇಟ್ ಎಂಬ ನೆಪವೊಡ್ಡಿ ಸಲೀಂ ಪದೇ ಪದೆ ಮನೆಗೆ ಬರುತ್ತಿದ್ದ. ಯಾರೂ ಇಲ್ಲದ ವೇಳೆ ಮನೆಗೆ ಬಂದು ಸರಸವಾಡುತ್ತಿದ್ದ. ಮದುವೆ ಆಗಿ ಮಕ್ಕಳಿದ್ದರೂ ಶಿಕ್ಷಕಿ ಸುಹಾಸಿನಿ ಜೊತೆ ಸಲೀಂ ಸಂಪರ್ಕ ಹೊಂದಿದ್ದಾನೆ. ಒಂದು ತಿಂಗಳ ಹಿಂದೆ ಮನೆಯಲ್ಲಿ ವಿಚಾರ ಗೊತ್ತಾಗುತ್ತಿದ್ದಂತೆ ನಾಪತ್ತೆಯಾಗಿದ್ದಾರೆ ಎಂದು ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಲವ್ ಜಿಹಾದ್ ಆರೋಪ ಹೊತ್ತಿರುವ ಸಲೀಂ, ರಾಯಚೂರು ನಗರದ ಹೊರವಲಯದ ಪೊತಗಲ್ ಗ್ರಾಮದ ನಿವಾಸಿ. ಈತ ಗಂಜ್‌ನಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ. ಸಲೀಂಗೆ ಮದುವೆಯಾಗಿ ಒಂದು ಹೆಣ್ಣು ಮಗು ಇದೆ. ಆದರೂ ಈತ ಶಿಕ್ಷಕಿ ಸುಹಾಸಿನಿ ಹಿಂದೆ ಬಿದ್ದಿದ್ದ.
10 ವರ್ಷಗಳ ಹಿಂದೆ ಲಿಂಗರಾಜ ಎಂಬವರ ಜೊತೆ ಸುಹಾಸಿನಿಯ ಮದುವೆಯಾಗಿತ್ತು. ಈಕೆ ಯರಮರಸ್ ಬಳಿಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾಳೆ. ಸುಹಾಸಿನಿಗೆ 7 ವರ್ಷದ ಮಗುವಿದ್ದು, ಪುಟ್ಟ ಮಗುವನ್ನೂ ಬಿಟ್ಟು ಪರಾರಿಯಾಗಿದ್ದಾಳೆ.
ಸುಹಾಸಿನಿ ಮಿಸ್ಸಿಂಗ್ ಬಗ್ಗೆ ತಾಯಿ ನಿರ್ಮಲಾ ಹೇಳಿರುವ ಹೇಳಿಕೆ ಹೀಗಿದೆ: ಸಲೀಂ ನನಗೆ ಇಷ್ಟ, ಅವನನ್ನು ಮದುವೆಯಾಗುವುದಾಗಿ ಹೇಳಿದ್ದಳು. ನಿನಗೆ ಮದುವೆಯಾಗಿ ಮಗುವೂ ಇರುವಾಗ ಇದು ಬೇಡ ಎಂದೆವು. ಸಲೀಂ ಕಾಲ್ ಮಾಡಿ, ನಾವಿಬ್ಬರೂ ಮದುವೆಯಾಗುತ್ತೇವೆ ಎಂದ. ಆಕೆಗೆ ಡೈವೋರ್ಸ್ ನೀಡದೆ ಹೇಗೆ ಮದುವೆ ಆಗಲು ಸಾಧ್ಯ ಎಂದೆವು. ಅ.20ರಂದು ಮನೆಯಲ್ಲಿ ಜಗಳ ಮಾಡಿ ಮನೆಬಿಟ್ಟು ಹೋದಳು. ನಮ್ಮ ಸಂಬಂಧಿಕರಿಗೆ ಕರೆ ಮಾಡಿ ತಾವು ಮದುವೆ ಆಗಿದ್ದೇವೆಂದು ಹೇಳಿದ್ದಾರೆ.
ನಂಜನಗೂಡು: ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸಮೀಪ…
ನಂಜನಗೂಡು: ಅಪರಿಚಿತ ಕಾರು ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ…
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಯಿಂದ ಗೊಲಗೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆ ಅಪಘಾತದಲ್ಲಿ ಗೊಲಗೇರಿ ಗ್ರಾಮದ ಯುವಕ…
ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್‌ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಭಟ್ಕಳ ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಅವರು 50,000 ಲಂಚ ಸ್ವೀಕರಿಸುತ್ತಿದ್ದ ವೇಳೆ…
ಗೌರಿಬಿದನೂರು ನಗರದ ವಿನಾಯಕ ನಗರದ ವಾಸಿ ಪದ್ಮ ಜೈನ್ (59) ಎಂಬುವವರ 50 ಗ್ರಾಂ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ…