Latest

ನನಗಾಗಿ ಯಾರು ತ್ಯಾಗ ಮಾಡಿಲ್ಲಾ ನಾನೇ ತ್ಯಾಗ ಮಾಡಿದ್ದೇನೆ:ಸಚಿವ ಹೆಬ್ಬಾರ್

ಮುಂಡಗೋಡ: ಪಟ್ಟಣದ ಟೌನ್ ಹಾಲ್ ನಲ್ಲಿ ಮುಂಡಗೋಡ ಮಂಡಲದ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಅಧ್ಯಕ್ಷರುಗಳು‌ ಹಾಗೂ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಕಾರ್ಮಿಕ ಸಚಿವರಾದ ಶಿವರಾಮ್ ಹೆಬ್ಬಾರ್ ಅವರು ಮಾತನಾಡಿ ಚುನಾವಣಾ ರಣಕಹಳೆ ಮೊಳಗಿಸಿದರು.
ಕೆಲ ದಿನಗಳ ಹಿಂದೆ ಮಾಜಿ ಶಾಸಕರಾದ ವಿ.ಎಸ್. ಪಾಟೀಲ್ ಅವರು ನನಗೆ ಮತ್ತು ಮೂಲ ಬಿಜೆಪಿಗರಿಗೆ ಪಕ್ಷದಲ್ಲಿ ಯಾವುದೆ ಬೆಲೆ ಸಿಗುತ್ತಿಲ್ಲ ಮತ್ತು ನನ್ನ ತ್ಯಾಗದಿಂದ ಹೆಬ್ಬಾರ್ ಅವರಿಗೆ ಟಿಕೇಟ್ ಸಿಕ್ಕಿದೆ .ನನ್ನ ಯಾವುದೇ ಕೆಲಸಗಳು ಆಗುತ್ತಿಲ್ಲ ಹಾಗಾಗಿ ಕಾಂಗ್ರೇಸ್ ಪಕ್ಷವನ್ನು ಸೇರುತ್ತಿದ್ದೇನೆ ಎಂದು ಪತ್ರಿಕಾ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಇಂದು ಕಾರ್ಮಿಕ ಸಚಿವರಾದ ಶಿವರಾಮ್ ಹೆಬ್ಬಾರ್ ಅವರು ಮುಂಡಗೋಡ ಮಂಡಲದ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರ,ಶಕ್ತಿ ಕೇಂದ್ರ ಮತ್ತು ಬೂತ್ ಅಧ್ಯಕ್ಷರುಗಳ ಹಾಗೂ ಭೂತ ಉಸ್ತುವಾರಿಗಳು ಮತ್ತು ಕಾರ್ಯಕರ್ತರ ಸಮಾವೇಶದಲ್ಲಿ ನನಗಾಗಿ ಯಾರು ತ್ಯಾಗ ಮಾಡಿಲ್ಲ ನಾನೇ ಶಾಸಕನಾಗಿ ಆಯ್ಕೆಯಾದ ಮೇಲೆ 14 ತಿಂಗಳಲ್ಲಿಯೇ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಚುನಾವಣೆಯಲ್ಲಿ ಗೆದ್ದು ಬಂದಿದ್ದೇನೆ.ನನಗಿಂತ ಮೊದಲೇ ವಿ.ಎಸ್. ಪಾಟೀಲ್ ಅವರಿಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು ಜೊತೆಗೆ ಗೂಟದ ಕಾರನ್ನು ನೀಡಲಾಗಿತ್ತು ಇದು ನನ್ನ ತ್ಯಾಗದಿಂದ ಎಂದು ಹೇಳಿದರು.ಯಾರು ಯಾರಿಗೂ ಮೋಸ ಮಾಡಲು ಸಾಧ್ಯವಿಲ್ಲ. ನಮ್ಮ ನಡೆ ನುಡಿ ಎಲ್ಲವನ್ನೂ ನಿರ್ಧರಿಸುತ್ತದೆ.ನೇರ ದಿಟ್ಟ ನಿರಂತರವಾಗಿದ್ದಾಗ ಯಾವುದಕ್ಕೂ ಭಯ ಪಡುವ ಅಗತ್ಯವಿಲ್ಲಾ ಬಡವರನ್ನು ಕಾಪಾಡುವ ಶಕ್ತಿಯನ್ನು ಭಗವಂತನು ನೀಡಿದ್ದಾನೆ ಹಾಗಾಗಿ ಅವನೇ ನನ್ನನ್ನು ಕಾಪಾಡುತ್ತಾನೆ ಎಂದರು. ನಾನು ಅಧಿಕಾರಕ್ಕೆ ಬಂದಮೇಲೆ ಕ್ಷೇತ್ರದ ಅಭಿವೃದ್ಧಿಯ ಚಿತ್ರಣವೇ ಬದಲಾಗಿದೆ ರೈತರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಸುಮಾರು 800 ಕೋಟಿ ರೂಪಾಯಿಗಳ ಅನುದಾನದಲ್ಲಿ ಕೆರೆಗೆ ನೀರು ತುಂಬಿಸುವ ಯೋಜನೆಯನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ,ಕರೋನಾ ಸಮಯದಲ್ಲಿ ಕ್ಷೇತ್ರದ ಜನರಿಗೆ ಪಕ್ಷಾತೀತವಾಗಿ ಹೆಬ್ಬಾರ್ ಫುಡ್ ಕೀಟಗಳನ್ನು ವಿತರಿಸಿದ್ದೇನೆ ಹೀಗೆ ಹತ್ತು ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ ಎಂದರು.
ಪಟ್ಟಣದ ಅಮ್ಮಾಜಿ ಕೆರೆಯಿಂದ ಸಿಡ್ಲಗುಂಡಿ ಸೇತುವೆಯವರೆಗೆ 25 ಕೋಟಿ ರೂಪಾಯಿಗಳ ಅನುದಾನದಲ್ಲಿ ಹಾಗೂ ಬಂಕಾಪುರ ರಸ್ತೆಯನ್ನು ತಾಲೂಕಿನ ಗಡಿ ಪ್ರದೇಶದವರೆಗೆ ಸುಮಾರು 12 ಕೋಟಿ ರೂಪಾಯಿಗಳ ಅನುದಾನದಲ್ಲಿ ಮಂಜೂರಾದ ರಸ್ತೆ ಅಗಲೀಕರಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಜಾರಿಗೆ ಹಂತದಲ್ಲಿ ಇದೆ ಎಂದರು.
ಜಿಲ್ಲಾಧ್ಯಕ್ಷರಾದ ವೆಂಕಟೇಶ್ ನಾಯಕ ಮಾತನಾಡಿ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ನಮ್ಮ ದೇಶ ಯಶಸ್ವಿಯಾಗಿ ಮುನ್ನಡೆಯುತ್ತಿದೆ.ದೇಶದ ರಕ್ಷಣಾ ವ್ಯವಸ್ಥೆಗೆ ಇಡೀ ವಿಶ್ವದಲ್ಲಿ ಅತಿ ಹೆಚ್ಚು ಬಲ ನೀಡಿದ ಸರ್ಕಾರ ನಮ್ಮದು ಎಂದು ಹೇಳಿದರು.
ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಲ್.ಟಿ.ಪಾಟೀಲ್,ನಿಕಟಪೂರ್ವ ಮಂಡಲಾಧ್ಯಕ್ಷರಾದ ಜಿ.ಎಸ್.ಕಾತೂರ, ಜಿಲ್ಲಾ ಉಪಾಧ್ಯಕ್ಷರಾದ ಅಶೋಕ ಛಲವಾದಿ,ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ಮಹೇಶ ಹೊಸಕೊಪ್ಪ, ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಸುಮಾರು 2000ಕ್ಕಿಂತಲೂ ಅಧಿಕ ಜನರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ತಾಲೂಕಿನ ಹಲವಾರು ಕಾಂಗ್ರೇಸ್ ಕಾರ್ಯಕರ್ತರು ಪಕ್ಷವನ್ನು ತೊರೆದು ಬಿಜೆಪಿ ಪಕ್ಷವನ್ನು ಸೇರಿದರು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ನಾಗಭೂಷಣ ಹೆಗಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರು ಎಸಳೆ,ಉಷಾ ಹೆಗಡೆ,ಗುರುಪ್ರಸಾದ ಹೆಗಡೆ, ಯುವ ನಾಯಕರಾದ ವಿವೇಕ್ ಹೆಬ್ಬಾರ್, ಜಿಲ್ಲಾ , ತಾಲೂಕೂ ಮಾರ್ಕೆಟಿಂಗ್ ಸೊಸೈಟಿ ಅಧ್ಯಕ್ಷರಾದ ರವಿ ಗೌಡ ಪಾಟೀಲ್‌, ಜಿಲ್ಲಾ ಉಪಾಧ್ಯಕ್ಷರಾದ ರೇಖಾ ಅಂಡಗಿ,ಜಿಲ್ಲಾ ಎಸ್. ಟಿ ಮೋರ್ಚಾ ಅಧ್ಯಕ್ಷರಾದ ಸಂತೋಷ್ ತಳವಾರ,ಉಮೇಶ ಬಿಜಾಪುರ,ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ ಪಾಟೀಲ್,ವಿಠ್ಠಲ್ ಬಾಳಂಬಿಡ, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಜಯಸುಧಾ ಭೋವಿ,ಉಪಾಧ್ಯಕ್ಷರಾದ ಶ್ರೀಕಾಂತ್ ಸಾನು, ಮಂಡಲದ ವಿವಿಧ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಶಕ್ತಿಕೇಂದ್ರದ ಅಧ್ಯಕ್ಷರು, ಬೂತ್ ಅಧ್ಯಕ್ಷರು ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಮಂಜುನಾಥ ಹರಿಜನ

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago