ಹುಬ್ಬಳ್ಳಿಯ ಕೊಪ್ಪಿಕರ ರಸ್ತೆಯ ಫ್ಲೈಯಿಂಗ್ ಮಷಿನ್ ಬಟ್ಟೆ ಅಂಗಡಿಯಲ್ಲಿ ಖರೀದಿ ನೆಪದಲ್ಲಿ ಬಂದು ಗಲ್ಲೆಯಲ್ಲಿದ್ದ 30 ಸಾವಿರ ರೂಪಾಯಿ ಹಣವನ್ನು ಕಳ್ಳತನ ಮಾಡಿ ಎಸ್ಕೇಪ್ ಆದ ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆ ಅಂಗಡಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈಗ ಸ್ಥಳೀಯರಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಘಟನೆಯ ವಿವರ: ಇಬ್ಬರು ಯುವ ಜೋಡಿಗಳು ಬಟ್ಟೆ ಖರೀದಿಗೆಂದು ಬಟ್ಟೆ ಅಂಗಡಿಗೆ ಫುಲ್ ಟಿಪ್‌ಟಫ್ ಆಗಿ ಬಂದು, ಯಾರೂ ಇಲ್ಲದ ಸಂದರ್ಭದಲ್ಲಿ ಗಲ್ಲೆಯಲ್ಲಿದ್ದ ಹಣವನ್ನು ಕದ್ದಿದ್ದಾರೆ. ಮಾಹಿತಿ ಪ್ರಕಾರ, ಈ ರೀತಿಯ ಕೃತ್ಯ ನಡೆಸುವುದು ಇವರ ವೃತ್ತಿಯಾಗಿದೆ.
ಈ ಬಾರಿ ಅವರು ಫ್ಲೈಯಿಂಗ್ ಮಷಿನ್ ಅಂಗಡಿಯಲ್ಲಿ 30 ಸಾವಿರ ರೂಪಾಯಿ ಕಳ್ಳತನ ಮಾಡಿ ಸ್ಥಳದಿಂದ ತಪ್ಪಿಸಿಕೊಂಡಿದ್ದಾರೆ. ಸಿಸಿ ಕ್ಯಾಮರಾ ದೃಶ್ಯಗಳನ್ನು ಅವಲೋಕಿಸಿದ ನಂತರ, ಅಂಗಡಿ ಮಾಲೀಕರು ಈ ಸಂಬಂಧ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳ ಸುಳಿವು ಪತ್ತೆ ಹಚ್ಚಲು ಕ್ರಮ ಕೈಗೊಂಡಿದ್ದಾರೆ. ಅಂಗಡಿ ಮಾಲೀಕರು ಮತ್ತು ಸಾರ್ವಜನಿಕರು ಈ ರೀತಿಯ ಪ್ರಕರಣಗಳ ಬಗ್ಗೆ ಎಚ್ಚರಿಕೆಯಿಂದ ಇರಲು ಸಲಹೆ ನೀಡಲಾಗಿದೆ.