ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಈ ಬಾರಿ ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷ ಸಂಘಟನೆಯಲ್ಲಿ ಬಹಳ ಗಟ್ಟಿಯಾಗಿದೆ.
ರಾಜ್ಯದಲ್ಲಿ ಈ ಬಾರಿ ಬಿಜೆಪಿ ಬಹುಮತದಿಂದ ಗೆದ್ದು ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಅವರದ್ದೇ ಗ್ಯಾರಂಟಿ ಇಲ್ಲ. ಅದಕ್ಕೆ ಕಾರ್ಡ್ ಹಂಚಿಕೆ ಮಾಡುತ್ತಿದ್ದಾರೆ. ಆ ಕಾರ್ಡ್ ಪಡೆದು ಜನರು ಏನು ಉಪ್ಪಿನಕಾಯಿ ಹಾಕಬೇಕಾ? ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಯಾವುದೂ ಅನುಷ್ಠಾನ ಆಗಲ್ಲ. ಎಲ್ಲಾ ಸಂದರ್ಭಗಳಲ್ಲೂ ಜನರನ್ನು ಮೋಸ ಮಾಡಲು ಸಾಧ್ಯವಿಲ್ಲ. ಕಾಂಗ್ರಸ್ ನಾಯಕರು ಜನರನ್ನು ಮರಳು ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.