ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತೆಯೊಬ್ಬರು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರದ ಕಬ್ಬನ್ಪೇಟೆಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದವರು ಐಶ್ವರ್ಯ(24) ಎಂದು ತಿಳಿದು ಬಂದಿದ್ದು. 2020ರಲ್ಲಿ ಮಂಜುನಾಥ್ ಎಂಬುವವರ ಜೊತೆ ಇವರ ವಿವಾಹವಾಗಿತ್ತು.
ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಹಲಸೂರು ಗೇಟ್ ಪೊಲೀಸ್ ಠಾಣೆಯ ಸಿಬ್ಬಂದಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.