ಅಮೇರಿಕಾದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ತಕ್ಷಣ, ಡೊನಾಲ್ಡ್ ಟ್ರಂಪ್ ನಿರೀಕ್ಷೆಯಂತೆ ಪ್ರಮುಖ ಘೋಷಣೆಗಳನ್ನು ಪ್ರಕಟಿಸಿದರು. ಪದಗ್ರಹಣ ಭಾಷಣದಲ್ಲಿ ಮಾತನಾಡಿದ ಟ್ರಂಪ್, ದಕ್ಷಿಣ ಗಡಿಯಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು. ಮೆಕ್ಸಿಕೋ-ಅಮೇರಿಕಾ ಗಡಿಯಲ್ಲಿ ಅಮೇರಿಕಾ ಸೇನೆಯನ್ನು ನಿಯೋಜಿಸಿ ಅಕ್ರಮ ನುಸುಳುಕೋರರ ಪ್ರವೇಶವನ್ನು ತಡೆಹಿಡಿಯುವುದಾಗಿ ಹೇಳಿದ್ದಾರೆ. ಗಡಿಯಲ್ಲಿ ಗೋಡೆ ನಿರ್ಮಾಣವನ್ನು ಪ್ರಾರಂಭಿಸುವುದಾಗಿ ಹಾಗೂ ಈಗಾಗಲೇ ಪ್ರವೇಶಿಸಿದ ಅಕ್ರಮ ವಲಸಿಗರನ್ನು ದೇಶದಿಂದ ಹೊರಹಾಕುವ ಕಾರ್ಯ ಪ್ರಾರಂಭವಾಗುವುದಾಗಿ ಘೋಷಿಸಿದರು.
ಅಮೇರಿಕಾ ಸೇನೆಯನ್ನು ಬಲಪಡಿಸುವುದು ತನ್ನ ಪ್ರಾಥಮಿಕ ಗುರಿಯೆಂದು ಅವರು ಸ್ಪಷ್ಟಪಡಿಸಿದರು. 2017ರೊಳಗೆ ಜಗತ್ತಿನ ಬಲಿಷ್ಠ ಸೇನೆಯನ್ನು ನಿರ್ಮಾಣ ಮಾಡುವ ದೃಷ್ಟಿಕೋನವನ್ನು ಅವರು ಪ್ರಕಟಿಸಿದರು. ಸರ್ಕಾರದ ಪಾರದರ್ಶಕತೆ ಹೆಚ್ಚಿಸಲು ಒಂದು ವಿಶೇಷ ಇಲಾಖೆಯನ್ನು ಸ್ಥಾಪಿಸಲು ಯೋಜನೆಗಳಿವೆ ಎಂದು ಟ್ರಂಪ್ ಹೇಳಿದರು. ಜೊತೆಗೆ ಭಯೋತ್ಪಾದನೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಕನಸನ್ನು ಹೊರಹಾಕಿದರು.
ಅಧ್ಯಕ್ಷ ಸ್ಥಾನ ವಹಿಸುವ ಮೊದಲು, ಭಾರತ ಸೇರಿದಂತೆ ಕೆಲವು ದೇಶಗಳು ಅಮೇರಿಕಾ ಉತ್ಪನ್ನಗಳಿಗೆ ಹೆಚ್ಚುವರಿ ತೆರಿಗೆ ವಿಧಿಸುತ್ತಿರುವುದರ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದ ಟ್ರಂಪ್, ಅಮೇರಿಕಾದ ಹಿತಕ್ಕಾಗಿ ಪ್ರತೀಕಾರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದರು. ತಮ್ಮ ಮೊದಲ ಭಾಷಣದಲ್ಲಿ, ಇತರ ದೇಶಗಳಿಗೆ ಹೆಚ್ಚಿನ ತೆರಿಗೆಗಳನ್ನು ವಿಧಿಸುವ ಸಾಧ್ಯತೆಯ ಬಗ್ಗೆ ಸುಳಿವು ನೀಡಿದ್ದು, ಈ ಕ್ರಮಗಳು ಅಮೇರಿಕಾದ ಜನರ ಹಿತಕ್ಕಾಗಿ ಎಂದು ಅವರು ಹೇಳಿದರು.
ಕೆಂಡ್ರ ವಿಭಾಗದ ಮಹಿಳಾ ಠಾಣೆ ಪೊಲೀಸರು, 37 ವರ್ಷದ ತಮಿಳುನಾಡು ಮೂಲದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಇಬ್ಬರನ್ನು…
ಚಾಮರಾಜನಗರ ಜಿಲ್ಲೆ, ಕೊಳ್ಳೇಗಾಲ ಪಟ್ಟಣದ ಮೋಳೆ ರಿಂಗ್ ರಸ್ತೆಯಲ್ಲಿ ಒಂದು ಅಂಶಾತುರ ಘಟನೆ ನಡೆದಿದೆ, ಕಾಡು ರಕ್ಷಣೆ ಮತ್ತು ಪರಿಸರ…
ಸಿಂಧನೂರು ತಾಲ್ಲೂಕಿನ ಉಪ್ಪಳ ಮತ್ತು ದಢೇಸುಗೂರು ಗ್ರಾಮದ ರೈತರಿಂದ 4,500 ಚೀಲ ಭತ್ತವನ್ನು ಖರೀದಿಸಿದ್ದ ವ್ಯಾಪಾರಿ ಮಲ್ಲೇಶ ₹60 ಲಕ್ಷ…
ಹುಕ್ಕೇರಿ ತಾಲೂಕಿನ ಸುಲ್ತಾನಪುರದಲ್ಲಿ ಏಳು ವರ್ಷದ ಬಾಲಕನನ್ನು 4 ಲಕ್ಷ ರೂ.ಗೆ ಮಾರಾಟ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಿರುವ…
ಕುಂದಗೋಳ: ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದಲ್ಲಿ ಸ್ವಚ್ಛತೆಗೆ ಸಂಬಂಧಿಸಿದ ಸಮಸ್ಯೆಗಳು ತೀವ್ರ ಸ್ವರೂಪ ತಾಳುತ್ತಿದ್ದು, ಗ್ರಾಮ ಪಂಚಾಯಿತಿ ಮುಂಭಾಗದ ರಸ್ತೆಗಳು…
ಹುಬ್ಬಳ್ಳಿಯ ಟಿಪ್ಪು ನಗರದಲ್ಲಿ ಘಟನೆ ನಡೆದಿದ್ದು, ವಿವಾಹಿತ ಮಹಿಳೆಯೊಂದಿಗೆ ಮಾತನಾಡಿದ ಯುವಕನನ್ನು ಕೆಲವರು ಹಾಡಹಗಲೇ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಯುವಕನನ್ನು…