ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಕ್ರೈಂ ಪ್ರಕರಣಗಳನ್ನು ಕಟ್ಟಿಹಾಕಲು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ದಿಟ್ಟ ಹೆಜ್ಜೆಯನ್ನಿಟ್ಟಿದ್ದು, ಇಬ್ಬರು ದ್ವಿಚಕ್ರ ವಾಹನ ಕಳ್ಳರನ್ನು ಹೆಡೆಮುರಿ ಕಟ್ಟಿ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನವಾದ ಬಗ್ಗೆ ಒಂದು ಪ್ರಕರಣ ದಾಖಲಾಗಿದ್ದು ಈ ಪ್ರಕರಣವನ್ನು ಭೇದಿಸಲು ಉಪನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರವರು ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಹುಬ್ಬಳ್ಳಿಯ ಉತ್ತರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶಿವಪ್ರಕಾಶ್ ನಾಯಕ್ ರವರ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಿ ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

ವರದಿ: ಶಿವು ಹುಬ್ಬಳ್ಳಿ.
error: Content is protected !!