ಕೇಂದ್ರ ಸಚಿವರೊಬ್ಬರ ಮೇಲಿನ ಅಭಿಮಾನ ಪ್ರೀತಿಯಿಂದ ಕಾರ್ಯಕ್ರಮದ ಪ್ರಚಾರದ ಬ್ಯಾನರ್ ಕಟ್ಟಲು ಹೋಗಿ ಕಾರ್ಮಿಕರೊಬ್ಬರು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ ದುರ್ಘಟನೆ ಧಾರವಾಡ್ ಜಿಲ್ಲೆಯ ಕುಂದಗೋಳ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ….
ಹೌದು ಕೇಂದ್ರ ಸಚಿವರೋಬ್ಬರ ಕಾರ್ಯಕ್ರಮದ ಅಂಗವಾಗಿ ಪ್ರದರ್ಶನದ ಬ್ಯಾನರ್ ಕಟ್ಟಲು ಪ್ರಯತ್ನಿಸಿದ ಕಾರ್ಮಿಕರು ಆಕಸ್ಮಿಕ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ಒಬ್ಬ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪದ್ದಾನೆ ಇನ್ನೊಬ್ಬ ಕಾರ್ಮಿಕ ತೀವ್ರ ಅಸ್ವಸ್ಥನಗಿದ್ದ ದುರ್ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಸಂಭವಿಸಿದೆ ಇಂದಿನ ಕುಂದಗೋಳ ಪಟ್ಟಣದ ಶ್ರೀ ಹರಭಟ್ಟ ಹೈಸ್ಕೂಲ್ ಶಾಲಾ ಮೈದಾನದಲ್ಲಿ ತಾಲೂಕಿನ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಿಗೆ ಬಣ್ಣದರ್ಪನೆ ಎಂಬ ಯೋಜನೆ ಅಡಿಯಲ್ಲಿ ಶಾಲಾ ಕಾಲೇಜುಗಳ ಗೋಡೆಗಳಿಗೆ ಬಣ್ಣ ಹಚ್ಚುವ ಕಾರ್ಯಕ್ರಮವನ್ನೂ ಉತ್ತರ ಕರ್ನಾಟಕದ ಪ್ರಸಿದ್ದಿ ರಾಜಕಾರಣಿ ಹಾಗೂ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ ಜೋಶಿ ರವರ ನೇತೃತ್ವದಲ್ಲಿ ಏರ್ಪಡಿಸಲಾಗಿತ್ತು ಇನ್ನೂ ಈ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಸಭಾ ಸದಸ್ಯರು ಹಾಗೂ ಚಲನಚಿತ್ರ ನಟರಾದ ಶ್ರೀ ಜಗ್ಗೇಶ್ ರವರು ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಲಿದ್ದರು ಇದೇ ಕಾರ್ಯಕ್ರಮದ ಪ್ರಚಾರದ ಬ್ಯಾನರಗಳನ್ನು ಕುಂದಗೋಳ ಪಟ್ಟಣ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಪ್ರಚಾರವಾಗಬೇಕು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಈ ಎಂಬ ಉದ್ದೇಶದಿಂದ ಕೆಲಸ ಮಾಡುತ್ತಿರುವಾಗ ಕುಂದಗೋಳ ಪಟ್ಟಣದ ಪಕ್ಕದ ಗುಡೆನಕಟ್ಟಿ ಎಂಬ ಗ್ರಾಮದಲ್ಲಿ ಬ್ಯಾನರ್ ಕಟೌಟ್ ಕಟ್ಟುತ್ತಿರುವಾಗ ಬಸಾಪುರ ಗ್ರಾಮದ ಇಸ್ಮಾಯಿಲ್ ಒಗ್ಗರಣೆ ಎಂಬ ವ್ಯಕ್ತಿ ಆಕಸ್ಮಿಕ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ ಇನ್ನೊಬ್ಬ ಕಾರ್ಮಿಕ ಪ್ರಕಾಶ್ ಎಂಬುವವ ಗಂಭೀರವಾಗಿ ಗಾಯಗೊಂಡಿದ್ದರು ಕೂಡಲೇ ಸ್ಥಳೀಯರೆಲ್ಲರೂ ಸೇರಿ ಅವರನ್ನು ಹುಬ್ಬಳ್ಳಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.
ವರದಿ: ಶಿವ ಹುಬ್ಬಳ್ಳಿ.
ನಂಜನಗೂಡು: ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸಮೀಪ…
ನಂಜನಗೂಡು: ಅಪರಿಚಿತ ಕಾರು ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ…
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಯಿಂದ ಗೊಲಗೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆ ಅಪಘಾತದಲ್ಲಿ ಗೊಲಗೇರಿ ಗ್ರಾಮದ ಯುವಕ…
ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್‌ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್‌ಓಸಿ ನೀಡಿ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಭಟ್ಕಳ ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಅವರು 50,000 ಲಂಚ ಸ್ವೀಕರಿಸುತ್ತಿದ್ದ ವೇಳೆ…
ಗೌರಿಬಿದನೂರು ನಗರದ ವಿನಾಯಕ ನಗರದ ವಾಸಿ ಪದ್ಮ ಜೈನ್ (59) ಎಂಬುವವರ 50 ಗ್ರಾಂ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ…