ಬೆಂಗಳೂರು: ಅಮೃತಹಳ್ಳಿಯ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತೆರಳಿದ್ದ ಗೃಹಿಣಿಯ ಮೇಲೆ ದೇವಸ್ಥಾನದ ಧರ್ಮದರ್ಶಿ ಮುನಿಕೃಷ್ಣಪ್ಪ ಎಂಬವರು ಅಡ್ಡಗಟ್ಟಿ ಹಲ್ಲೆ ಮಾಡಿದ್ದಾರೆ ಎನ್ನಲಾದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಿದ್ದು ದೂರಿನಲ್ಲಿ ನೀನು ಸ್ನಾನ ಮಾಡದೆ ಶುದ್ಧಿ ಇಲ್ಲದೆ ದೇವಸ್ಥಾನಕ್ಕೆ ಬಂದಿದ್ದೀಯಾ ನಿನಗೆ ದೇವರ ದರ್ಶನ ಮಾಡಲು ಅನುಮತಿ ಇಲ್ಲ ಎಂದು ಹೊಡೆದು ನಿಂದಿಸಿದ್ದಾರೆ ಎಂದು ದೂರನ್ನು ದಾಖಲಿಸಿದ್ದು ಇದಕ್ಕೆ ದೇವಸ್ಥಾನದ ಧರ್ಮದರ್ಶಿ ನನ್ನ ಮೈ ಮೇಲೆ ದೇವರು ಬರುತ್ತೆ, ವೆಂಕಟೇಶ್ವರ ನನ್ನ ಪತಿ. ಗರ್ಭಗುಡಿಯಲ್ಲಿ ನಾನು ವೆಂಕಟೇಶ್ವರನ ಪಕ್ಕ ಕೂರಬೇಕು ಎಂದು ಮಹಿಳೆ ಹಠಕ್ಕೆ ಬಿದ್ದಿದ್ದಾಳೆ. ಈ ವೇಳೆ ಅರ್ಚಕ ರಾಜಾಜಂ, ಮಹಿಳೆಗೆ ತಿಳಿ ಹೇಳಿದರು. ಆದರೂ ಕೇಳದೇ ಗರ್ಭಗುಡಿಯ ಒಳಗೆ ಹೋಗಲು ಯತ್ನಿಸಿದ್ದಾಳೆ. ಈ ವೇಳೆ ಸ್ಥಳಕ್ಕೆ ಬಂದ ದೇವಸ್ಥಾನದ ಧರ್ಮದರ್ಶಿ ಮುನಿಕೃಷ್ಣ ಅವರನ್ನು ಅವಾಚ್ಯವಾಗಿ ನಿಂದಿಸಿ ಮುಖಕ್ಕೆ ಉಗಿದಿದ್ದಳು ಎಂದು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಧರ್ಮದರ್ಶಿ ಮಹಿಳೆಯ ವಿರುದ್ಧ ಪ್ರತಿ ದೂರನ್ನು ದಾಖಲಿಸಿರುತ್ತಾರೆ. ದೇವಸ್ಥಾನಕ್ಕೆ ಬಂದು ಮಹಿಳೆಯನ್ನು ಹೇಮಾವತಿ ಎಂದು ಗುರುತಿಸಲಾಗಿದೆ. ಸದ್ಯ ಆರೋಪಿ ಮುನಿಕೃಷ್ಣರನ್ನು ಪೊಲೀಸರು ಬಂಧಿಸಿದ್ದಾರೆ.
ಹೆಚ್ಚಿನ ಅಪ್ಡೇಟ್ಸ್ ಗಳಿಗಾಗಿ ಭ್ರಷ್ಟರ ಬೇಟೆ ಗ್ರೂಪನ್ನು ಸೇರ್ಪಡೆಗೊಳ್ಳಿ 👇
https://chat.whatsapp.com/GxPK1CS1zBeHuQMDPO7SYU