ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ರನ್ನು ನೋಡಲು ವಿನೋದ್ ರಾಜ್ ರವರು ದಿನಕರ್ ತೂಗುದೀಪ್ ರವರ ಕುಟುಂಬದ ಜೊತೆಯಲ್ಲಿ ತೆರಳಿದ್ದು ಬಳಿಕ ಮಧ್ಯಮದ ಜೊತೆ ಮಾತನಾಡಿ ದರ್ಶನ್ ರನ್ನು ಜೈಲಿನಲ್ಲಿ ನೋಡಿ ಬೇಸರವಾಯಿತು ಎಂದು ಹೇಳಿದ್ದಾರೆ.
ನನ್ನ ಮನೋಭಾವನೆಯಲ್ಲಿ ದರ್ಶನ್ ಒಬ್ಬ ಕಲಾವಿದ. ಬಂದ ತಕ್ಷಣ ನನ್ನನ್ನು ನೋಡಿ ತುಂಬಿಕೊಂಡರು. ಅದೇ ಪ್ರೀತಿ ಅದೇ ಆತ್ಮೀಯತೆಯಿಂದ ಮಾತನಾಡಿದರು. ಸ್ವೇಚ್ಚಾನುಸಾರವಾಗಿ ಓಡಾಡುತ್ತಿದ್ದ ಮನುಷ್ಯ ದರ್ಶನ್ ಅವರಾಗಿದ್ದರು. ದೇವರ ದಯೆಯಿಂದ ಎಲ್ಲಾ ಸರಿ ಹೋಗಬೇಕು ಎಂದು ಕೇಳಿಕೊಳ್ಳುತ್ತೇನೆ.
ದರ್ಶನ್ ನೋಡಿದಾಗ ಮನಸ್ಸಿಗೆ ತುಂಬಾ ನೋವಾಯಿತು. ಆದರೆ ಅಲ್ಲಿ ಪ್ರಾಣ ಕಳೆದುಕೊಂಡ ತಂದೆ ತಾಯಿ ನೋವು ದೊಡ್ಡದು. ಆತನ ಹೆಂಡತಿ ಗರ್ಭದಲ್ಲಿರುವ ಮಗು ಎಲ್ಲವನ್ನು ನೆನೆಸಿಕೊಂಡರೆ ತುಂಬಾ ನೋವಾಗುತ್ತದೆ ಎಂದು ಹೇಳಿದರು.